ಸರ್ಕಾರಿ ಶಾಲಾ ಮಕ್ಕಳಿಗೆ ಡಿಕೆ ಗುಡ್ ನ್ಯೂಸ್; ಉನ್ನತ ಶಿಕ್ಷಣ, ಉದ್ಯೋಗದಲ್ಲಿ ಶೇ.7.5 ರಷ್ಟು ಮೀಸಲಾತಿ ಘೋಷಣೆ ಮಾಡಿದ CM ಶಿವಕುಮಾರ್!

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Karnataka CM DK Shivakumar announces a 7.5 percent internal reservation for government school students
ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ರಷ್ಟು ಮೀಸಲಾತಿ ಘೋಷಣೆ ಮಾಡಿದ ಶಿವಕುಮಾರ್Online Desk
Updated on

ಕೂಡ್ಲಿಗಿ (ವಿಜಯನಗರ): ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ, ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಳ್ಳಿಗಳಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಶೇಕಡಾ 7.5 ರಷ್ಟು ಮೀಸಲಾತಿ ನೀಡಲು ಸರ್ಕಾರ ಮುಂದಾಗಿದೆ. ಗ್ರಾಮೀಣ ಪ್ರದೇಶದ ಬಡ ಹಾಗೂ ಸಾಮಾನ್ಯ ಕುಟುಂಬಗಳ ಮಕ್ಕಳಿಗೆ ಉನ್ನತ ವ್ಯಾಸಂಗ ಮತ್ತು ಅವಕಾಶಗಳಲ್ಲಿ ನೆರವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಕುರಿತ ಸಂಪೂರ್ಣ ನಿಯಮಾವಳಿ ಮತ್ತು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಏತನ್ಮಧ್ಯೆ, ಗ್ರಾಮೀಣ ಪ್ರದೇಶದಲ್ಲಿ 1 ರಿಂದ 10 ನೇ ತರಗತಿವರೆಗೆ ಓದಿದ ವಿದ್ಯಾರ್ಥಿಗಳಿಗೆ ಪ್ರಸ್ತುತ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ನೇರ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಎಲ್ಲಾ ಗ್ರೂಪ್ ಹುದ್ದೆಗಳಲ್ಲಿ 25% ಮೀಸಲಾತಿ ಹಾಗೂ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ 15% ಮೀಸಲಾತಿ ನಿಗದಿಪಡಿಸಲಾಗಿದೆ.

Karnataka CM DK Shivakumar announces a 7.5 percent internal reservation for government school students
'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com