ಶನಿವಾರದಂದು 'ಪ್ರಜಾಸೇವಾ' ಕಾರ್ಯಕ್ರಮ: ಮನೆ ಬಾಗಿಲಿಗೆ ಸರ್ಕಾರ; ಡಿಕೆ ಶಿವಕುಮಾರ್

ಎಲ್ಲ ಸಮಸ್ಯೆಗಳನ್ನೂ ತಕ್ಷಣವೇ ಪರಿಹರಿಸಲಾಗುತ್ತದೆ ಎಂದು ಹೇಳುವುದಿಲ್ಲ. ಆದರೆ ಜನರ ಬಳಿಗೆ ತೆರಳಿ ಅವರ ಸಮಸ್ಯೆ ಮತ್ತು ಭಾವನೆಗಳನ್ನು ನೇರವಾಗಿ ತಿಳಿದುಕೊಂಡರೆ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಅವಕಾಶ ದೊರೆಯಲಿದೆ.
CM DK Shivakumar
ಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕೂಡ್ಲಗಿಯಲ್ಲಿ ‘ಪ್ರಜಾಸೇವಾ ಇಲಾಖೆ’ಗೆ ಚಾಲನೆ ನೀಡಲಾಗುತ್ತಿದೆ. ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ" ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಪ್ರತಿ ತಿಂಗಳು ಮೊದಲ ಹಾಗೂ ಮೂರನೇ ಶನಿವಾರ ಸಚಿವರು ಕಡ್ಡಾಯವಾಗಿ ಒಂದೊಂದು ತಾಲೂಕಿಗೆ ತೆರಳಿ ಜನರ ಸಮಸ್ಯೆ ಆಲಿಸಬೇಕು. ಮೊದಲ ಸುತ್ತಿನ ಬಳಿಕ ಹೋಬಳಿ ಮಟ್ಟಕ್ಕೂ ತೆರಳಬೇಕು. ಶಾಸಕರು ಪಂಚಾಯಿತಿ ಮಟ್ಟದಲ್ಲಿ ಜನರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲು ಸೂಚಿಸಲಾಗಿದೆ. ಎಲ್ಲ ಸಮಸ್ಯೆಗಳನ್ನೂ ತಕ್ಷಣವೇ ಪರಿಹರಿಸಲಾಗುತ್ತದೆ ಎಂದು ಹೇಳುವುದಿಲ್ಲ. ಆದರೆ ಜನರ ಬಳಿಗೆ ತೆರಳಿ ಅವರ ಸಮಸ್ಯೆ ಮತ್ತು ಭಾವನೆಗಳನ್ನು ನೇರವಾಗಿ ತಿಳಿದುಕೊಂಡರೆ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಅವಕಾಶ ದೊರೆಯಲಿದೆ" ಎಂದು ಹೇಳಿದರು.

"ಶಿಕ್ಷಕರ ದಿನಾಚರಣೆಯ ಹಿನ್ನೆಲೆ ಉನ್ನತ ಶಿಕ್ಷಣ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರು ಸೇರಿದಂತೆ ಮೂವರು ಸಚಿವರಿಗೆ ವಿಶೇಷ ಜವಾಬ್ದಾರಿ ಇರುವುದರಿಂದ, ಅವರನ್ನು ಹೊರತುಪಡಿಸಿ ಉಳಿದ ಸಚಿವರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಪ್ರಜಾಸೇವೆ ಅಭಿಯಾನದಲ್ಲಿ ತಾವು ಸ್ವತಃ ಬೆಳಿಗ್ಗೆಯಿಂದ ಸಾರ್ವಜನಿಕರು ನೀಡುವ ಅರ್ಜಿಗಳನ್ನು ಸ್ವೀಕರಿಸಿ, ಅಧಿಕಾರಿಗಳ ಜೊತೆಗೂಡಿ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಈ ಪ್ರಕ್ರಿಯೆ ಎಲ್ಲಾ ತಾಲೂಕುಗಳಲ್ಲೂ ಮುಂದುವರಿಯಲಿದೆ" ಎಂದರು.

ಸರ್ಕಾರಿ ಸೇವೆ, ಸೌಲಭ್ಯ ಪಡೆಯುವಲ್ಲಿನ ಅಡಚಣೆ, ಸಮಸ್ಯೆ, ಸವಾಲುಗಳ ಬಗ್ಗೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸರಳ ವಿಧಾನದಡಿ ಹೇಳಿಕೊಳ್ಳಬಹುದಾದ ವ್ಯವಸ್ಥೆಯನ್ನು ಪ್ರಜಾಸೇವಾ ಇಲಾಖೆ ಮೂಲಕ ಸರ್ಕಾರ ಕಲ್ಪಿಸಿದೆ.

ಸಣ್ಣ ಪುಟ್ಟ ಸಮಸ್ಯೆಗಳ ಪರಿಹಾರಕ್ಕೆ ಕಚೇರಿಗಳಿಗೆ ಅಲೆದಾಟ ತಪ್ಪಿಸಲು, ನಾನಾ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಿ ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಹಾಗೂ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಹೆಚ್ಚಿಸುವ ದೃಷ್ಟಿಯಿಂದ ಸರ್ಕಾರ ವಿನೂತನ ಅಹವಾಲು ಸ್ವೀಕಾರ ವ್ಯವಸ್ಥೆ ರೂಪಿಸಿದೆ.

ಪ್ರತಿ ಶನಿವಾರ ತಾಲೂಕು/ಹೋಬಳಿ ಮಟ್ಟದ 'ಪ್ರಜಾಸೇವಾ ಅಭಿಯಾನ' ಸಭೆ ನಡೆಯಲಿದೆ. ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕು ಕೇಂದ್ರದಲ್ಲಿ ಸಭೆ ನಡೆಯುತ್ತದೆ. ಎರಡನೇ ಮತ್ತು ನಾಲ್ಕನೇ ಶನಿವಾರದಂದು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು/ ಹೋಬಳಿ ಮಟ್ಟದಲ್ಲಿ ಸಭೆ ಆಯೋಜನೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com