

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭದ್ರತೆಯ ಪ್ರಶ್ನೆ ಮೂಡಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ.
ನಗರದ ಐಟಿಸಿ (ITC) ಫ್ಲೈಓವರ್ ಬಳಿ ಶನಿವಾರ ಮುಂಜಾನೆ ಪತಿಯ ಎದುರೇ ಮಹಿಳೆಯೊಬ್ಬರ ಮೇಲೆ ಐದರಿಂದ ಆರು ಜನರ ದುಷ್ಕರ್ಮಿಗಳ ಗುಂಪೊಂದು ಲೈಂಗಿಕ ದೌರ್ಜನ್ಯ ಎಸಗಿರುವ ಭೀಕರ ಕೃತ್ಯ ಬೆಳಕಿಗೆ ಬಂದಿದೆ.
ಸೆಪ್ಟೆಂಬರ್ 5ರ ಶನಿವಾರ ಮುಂಜಾನೆ ಸುಮಾರು 4:00 ಗಂಟೆಯ ವೇಳೆ ಈ ಘಟನೆ ನಡೆದಿದೆ. ದಂಪತಿ ಸ್ನೇಹಿತರ ಮನೆಗೆ ಭೇಟಿ ನೀಡಿ ಆಟೋರಿಕ್ಷಾದಲ್ಲಿ ತಮ್ಮ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಐದರಿಂದ ಆರು ಜನ ದುಷ್ಕರ್ಮಿಗಳು ಬೈಕ್‌ಗಳಲ್ಲಿ ಬಂದು ಆಟೋವನ್ನು ಅಡ್ಡಗಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಕಾಮುಕರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದಾರೆ.
ಘಟನಾ ಸ್ಥಳ ಹಾಗೂ ಸುತ್ತಮುತ್ತಲಿನ ರಸ್ತೆಗಳ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ತೀವ್ರವಾಗಿ ಪರಿಶೀಲಿಸಲಾಗುತ್ತಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.