ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಹೊರಗಿರುವಂತೆ 'ರೌಡಿ ಶೀಟರ್'ಗೆ ಆದೇಶ!

30 ವರ್ಷದ ಚಂದ್ರಶೇಖರ್ ಅಲಿಯಾಸ್ ಚಂದ್ರ, ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾರೆ. ಇವರು ಕಗ್ಗಲಿಪುರದಲ್ಲಿ ನಾಲ್ಕು ಮತ್ತು ತಲಘಟ್ಟಪುರದಲ್ಲಿ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿದ್ದರು.
Casual Images
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೊಲೆ ಮತ್ತು ಕೊಲೆ ಯತ್ನ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿರುವ ರೌಡಿ ಶೀಟರ್ ಗೆ' (ಪೊಲೀಸ್ ದಾಖಲೆಗಳಲ್ಲಿ ಹೆಸರಿರುವ ಅಪರಾಧಿ) ಒಬ್ಬರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಹೊರಗಿರುವಂತೆ (ಜಿಲ್ಲಾ ಬಹಿಷ್ಕಾರ) ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

30 ವರ್ಷದ ಚಂದ್ರಶೇಖರ್ ಅಲಿಯಾಸ್ ಚಂದ್ರ, ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾರೆ. ಇವರು ಕಗ್ಗಲಿಪುರದಲ್ಲಿ ನಾಲ್ಕು ಮತ್ತು ತಲಘಟ್ಟಪುರದಲ್ಲಿ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿದ್ದರು.

ಆದರೆ, ಜಾಮೀನಿನ ಮೇಲಿದ್ದಾಗಲೂ ಅವರು ತಮ್ಮ ಅಪರಾಧ ಕೃತ್ಯಗಳನ್ನು ಮುಂದುವರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Casual Images
ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಭದ್ರತಾ ವೈಫಲ್ಯ: ರೌಡಿ ಶೀಟರ್ ಗ್ಯಾಂಗ್ ಎಣ್ಣೆ ಪಾರ್ಟಿ!

ಈ ಹಿನ್ನೆಲೆಯಲ್ಲಿ ಕಗ್ಗಲಿಪುರ ಪೊಲೀಸರು ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರೋಹನ್ ಜಗದೀಶ್ ಅವರಿಗೆ ಇವರನ್ನು ಜಿಲ್ಲೆಯಿಂದ ಹೊರಗಿಡುವಂತೆ (ಎಕ್ಸ್‌ಟರ್ನ್‌ಮೆಂಟ್) ಪ್ರಸ್ತಾವನೆ ಸಲ್ಲಿಸಿದ್ದರು. ಅದರಂತೆ, ಎಸ್ಪಿ ಅವರು ಸೆಪ್ಟೆಂಬರ್ 3 ರಂದು ಈ ಆದೇಶವನ್ನು ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಶಾಂತಿಭಂಗ ಉಂಟುಮಾಡುವ ಹಾಗೂ ಕಾನೂನು-ಸುವ್ಯವಸ್ಥೆಗೆ ಅಡ್ಡಿಪಡಿಸುವವರ ವಿರುದ್ಧದ ಕ್ರಮಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com