ಮಂಡ್ಯ: ಕಬ್ಬಿಣದ ಆಂಗಲ್ ತುಂಬಿದ್ದ ಟ್ರ್ಯಾಕ್ಟರ್‌ಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಚಾಲಕ ಸಾವು!

ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಆಂಗಲ್ ಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ್ದು, ಪರಿಣಾಮವಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
Driver die as KSRTC bus rams tractor in Mandya
ಟ್ರ್ಯಾಕ್ಟರ್‌ಗೆ KSRTC ಬಸ್ ಡಿಕ್ಕಿ
Updated on

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಬುಧವಾರ ಕಬ್ಬಿಣದ ಆಂಗಲ್ ಗಳು ತುಂಬಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಕಬ್ಬಿಣದ ಆಂಗಲ್ ಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಕೆಎಸ್ಆರ್ ಟಿಸಿ ಬಸ್ ಓವರ್ ಟೆಕ್ ಮಾಡಲು ಯತ್ನಿಸಿದಾಗ ಈ ದುರಂತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಆಂಗಲ್ ಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ್ದು, ಪರಿಣಾಮವಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Driver die as KSRTC bus rams tractor in Mandya
ಓವರ್‌ಟೇಕ್‌ ಎಡವಟ್ಟು, ಮೂರೇ ಸೆಕೆಂಡ್ ನಲ್ಲಿ ದುರಂತ!; ಮಂಡ್ಯದಲ್ಲಿ ಭೀಕರ ಕಾರು ಅಪಘಾತ: ಮಹಿಳೆ ಸಾವು, Video Viral

ಅಪಘಾತದಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com