KGF ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ: ತರಗತಿಯಲ್ಲಿ ಯುವಕನ ಥಳಿತಕ್ಕೆ ಪ್ರಜ್ಞೆತಪ್ಪಿ ಬಿದ್ದ ವಿದ್ಯಾರ್ಥಿನಿ, Video

ಕರ್ನಾಟಕದ ಕೆಜಿಎಫ್ ನಗರದ ಮಹಾವೀರ್ ಜೈನ್ ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ವಾಗ್ವಾದ ನಂತರ ಹಿಂಸಾಚಾರಕ್ಕೆ ತಿರುಗಿದ್ದು ವಿದ್ಯಾರ್ಥಿನಿಯ ಮೇಲೆ ದೈಹಿಕ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
Female Student Collapse
ಕೆಜಿಎಫ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಧ್ಯೆ ಜಗಳ
Updated on

ಕರ್ನಾಟಕದ ಕೆಜಿಎಫ್ ನಗರದ ಮಹಾವೀರ್ ಜೈನ್ ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ವಾಗ್ವಾದ ನಂತರ ಹಿಂಸಾಚಾರಕ್ಕೆ ತಿರುಗಿದ್ದು ವಿದ್ಯಾರ್ಥಿನಿಯ ಮೇಲೆ ದೈಹಿಕ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿದ್ಯಾರ್ಥಿಗಳು ಕುರ್ಚಿಯನ್ನು ಮುಂದಕ್ಕೆ ಸರಿಸುವ ಬಗ್ಗೆ ಜಗಳವಾಡುತ್ತಿದ್ದಾಗ ವಿವಾದ ಪ್ರಾರಂಭವಾಯಿತು.

ವಾಗ್ವಾದದ ಸಮಯದಲ್ಲಿ ವಿದ್ಯಾರ್ಥಿನಿಯನ್ನು ಆಕೆಯ ಕೆಲವು ಸಹಪಾಠಿಗಳು ಅಪಹಾಸ್ಯ ಮಾಡಿದ್ದಾರೆ. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು ವಿದ್ಯಾರ್ಥಿನಿ ಒಬ್ಬನಿಗೆ ಕಪಾಳಮೋಕ್ಷ ಮಾಡಿದಳು. ಈ ವೇಳೆ ಮತ್ತೊಬ್ಬ ವಿದ್ಯಾರ್ಥಿ ವಿದ್ಯಾರ್ಥಿನಿಗೆ ಬಲವಾಗಿ ಹೊಡೆದಿದ್ದು ಆಕೆ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಳು. ವಿದ್ಯಾರ್ಥಿನಿಗೆ ಎರಡರಿಂದ ಮೂರು ಬಾರಿ ಹೊಡೆದಿದ್ದು, ನಂತರ ಆಕೆ ಪ್ರಜ್ಞೆ ಕಳೆದುಕೊಂಡು ತರಗತಿಯ ನೆಲದ ಮೇಲೆ ಕುಸಿದಿದ್ದಾಳೆ. ನಂತರ ಇತರ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಿ ಆಕೆಯ ನೆರವಿಗೆ ಬಂದಿದ್ದು ವೈದ್ಯಕೀಯ ಚಿಕಿತ್ಸೆಗಾಗಿ ಕೆಜಿಎಫ್‌ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯದರು.

Female Student Collapse
ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಬಿಯರ್ ಬಾಟಲ್‌ನಿಂದ ಪತ್ನಿ ಕೊಂದು ಪತಿ ಆತ್ಮಹತ್ಯೆ!

ಘಟನೆಯ ಬಗ್ಗೆ ದೂರು ಬಂದ ನಂತರ, ರಾಬರ್ಟ್‌ಸನ್‌ಪೇಟೆ ಪೊಲೀಸರು ಭಾಗಿಯಾಗಿದ್ದಾರೆ ಎನ್ನಲಾದ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯು ವಿದ್ಯಾರ್ಥಿನಿಯ ಸುರಕ್ಷತೆ ಮತ್ತು ಕಾಲೇಜು ಕ್ಯಾಂಪಸ್‌ಗಳಲ್ಲಿ ಸಣ್ಣಪುಟ್ಟ ವಿವಾದಗಳು ದೈಹಿಕ ಹಿಂಸಾಚಾರಕ್ಕೆ ಕಾರಣವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com