37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ವಿದ್ಯಾರ್ಥಿ ಚುನಾವಣೆಯಲ್ಲಿ ಯಾವುದೇ ಮೀಸಲಾತಿ ಇರುವುದಿಲ್ಲ. ಒಂದು ವೇಳೆ ಕಾಲೇಜಿನಲ್ಲಿ ಎಲ್ಲಾ ವಿದ್ಯಾರ್ಥಿಗಳೂ ಚುನಾವಣೆ ಬೇಡ ಎಂದರೆ ಅಲ್ಲಿ ಚುನಾವಣೆ ನಡೆಯುವುದಿಲ್ಲ.
Chief Minister DK Shivakumar
ಮುಖ್ಯಮಂತ್ರಿ ಡಿಕೆ ಶಿವಕುಮಾರ್
Updated on

ಬೆಂಗಳೂರು: ರಾಜ್ಯದಲ್ಲಿ 37 ವರ್ಷ ನಿಷೇಧದ ಬಳಿಕ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ಮರುಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದ್ದು, ಇದಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಸಲುವಾಗಿ ವಿದ್ಯಾರ್ಥಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ಈ ಹಿಂದೆ ಕಾಲೇಜು ಕ್ಯಾಂಪಸ್‌ಗಳಲ್ಲಿ ಹೆಚ್ಚುತ್ತಿದ್ದ ಹಿಂಸಾಚಾರ, ಗೂಂಡಾಗಿರಿ ಮತ್ತು ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ 1989ರಲ್ಲಿ ಆಗಿನ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಸಂಪೂರ್ಣವಾಗಿ ನಿಷೇಧಿಸಿತ್ತು.

Chief Minister DK Shivakumar
37 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯಾರ್ಥಿ ಚುನಾವಣೆ: ಆದರೆ, ಕ್ಯಾಂಪಸ್ ರಾಜಕೀಯಕ್ಕೆ ಬ್ರೇಕ್! ಕಠಿಣ ನಿಯಮಗಳೊಂದಿಗೆ ಸ್ಟೂಡೆಂಟ್ಸ್ ಎಲೆಕ್ಷನ್

ಇದೀಗ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿಷೇಧವನ್ನು ತೆರವುಗೊಳಿಸಿ ಚುನಾವಣೆ ನಡೆಸಲು ಮುಂದಾಗಿದೆ.

ಈ ವಿದ್ಯಾರ್ಥಿ ಸಂಘದಲ್ಲಿ ಓರ್ವ ಅಧ್ಯಕ್ಷ, ಓರ್ವ ಮಹಿಳೆ ಸೇರಿದಂತೆ ಇಬ್ಬರು ಉಪಾಧ್ಯಕ್ಷರು ಇರುತ್ತಾರೆ. ಓರ್ವ ಕಾರ್ಯದರ್ಶಿ, ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿ ಜಂಟಿ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಥಿ ಚುನಾವಣೆಯಲ್ಲಿ ಯಾವುದೇ ಮೀಸಲಾತಿ ಇರುವುದಿಲ್ಲ. ಒಂದು ವೇಳೆ ಕಾಲೇಜಿನಲ್ಲಿ ಎಲ್ಲಾ ವಿದ್ಯಾರ್ಥಿಗಳೂ ಚುನಾವಣೆ ಬೇಡ ಎಂದರೆ ಅಲ್ಲಿ ಚುನಾವಣೆ ನಡೆಯುವುದಿಲ್ಲ. ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳಿಗೆ ಅವಕಾಶ ಇರುವುದಿಲ್ಲ.

2026-27ನೇ ಸಾಲಿನಿಂದಲೇ ಇದನ್ನು ಜಾರಿಗೆ ತರಲಾಗುತ್ತಿದ್ದು, ಯಾವುದೇ ಪಕ್ಷ ಮತ್ತು ಸಂಘಟನೆಗಳು ಹೋಗಿ ಪ್ರಚಾರ ಮಾಡುವುಂತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com