ಮಂಡ್ಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತ: ಕುದಿಯುವ ನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು

ಖಾಸಗಿ ಏಜೆನ್ಸಿಯೊಂದರ ಮೂಲಕ ಕಳೆದ ಒಂದೂವರೆ ವರ್ಷದಿಂದ ಅವರು ಗುತ್ತಿಗೆ ಆಧಾರದ ಮೇಲೆ ಮೈಶುಗರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.
Worker dies after falling into hot water pit at sugar factory in Mandya
ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ದುರಂತ
Updated on

ಮಂಡ್ಯ: ಕರ್ನಾಟಕದ ಮಂಡ್ಯ ಜಿಲ್ಲೆಯ ಮೈಸೂರು ಶುಗರ್ ಫ್ಯಾಕ್ಟರಿ (ಮೈಶುಗರ್)ಯಲ್ಲಿ ಬಿಸಿ ನೀರಿನ ಹೊಂಡಕ್ಕೆ ಬಿದ್ದು 33 ವರ್ಷದ ಗುತ್ತಿಗೆ ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದೆ.

ಕಾರ್ಮಿಕನ ಸಾವಿಗೆ ಕಾರ್ಖಾನೆ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು, ಸಂಬಂಧಿಕರು ಹಾಗೂ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು.

ಮೃತ ಕಾರ್ಮಿಕನನ್ನು ಮದ್ದೂರು ತಾಲೂಕಿನ ಕೆ. ಶೆಟ್ಟಿಹಳ್ಳಿ ಗ್ರಾಮದ ಚರಣ್ ಎಂದು ಗುರುತಿಸಲಾಗಿದೆ. ಖಾಸಗಿ ಏಜೆನ್ಸಿಯೊಂದರ ಮೂಲಕ ಕಳೆದ ಒಂದೂವರೆ ವರ್ಷದಿಂದ ಅವರು ಗುತ್ತಿಗೆ ಆಧಾರದ ಮೇಲೆ ಮೈಶುಗರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಮೂಲಗಳ ಪ್ರಕಾರ, ಸೆಪ್ಟೆಂಬರ್ 3ರಂದು ಕಾರ್ಖಾನೆಯೊಳಗಿನ ಬಿಸಿ ನೀರಿನ ಹೊಂಡಕ್ಕೆ ಚರಣ್ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಹಲವು ದಿನಗಳ ಕಾಲ ಚಿಕಿತ್ಸೆ ಪಡೆದರೂ ಚರಣ್ ಅವರ ಸ್ಥಿತಿ ಸುಧಾರಿಸದೆ, ಮಂಗಳವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚರಣ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕೆ. ಶೆಟ್ಟಿಹಳ್ಳಿ ಗ್ರಾಮದ ಕುಟುಂಬಸ್ಥರು, ಸಂಬಂಧಿಕರು ಹಾಗೂ ಗ್ರಾಮಸ್ಥರು ಮೈಸುಗರ್ ಕಾರ್ಖಾನೆ ಎದುರು ಜಮಾಯಿಸಿ ಧರಣಿ ನಡೆಸಿದರು.

Worker dies after falling into hot water pit at sugar factory in Mandya
ಮಂಡ್ಯ: ಕಬ್ಬಿಣದ ಆಂಗಲ್ ತುಂಬಿದ್ದ ಟ್ರ್ಯಾಕ್ಟರ್‌ಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಚಾಲಕ ಸಾವು!

ನಿರ್ಲಕ್ಷ್ಯ ಆರೋಪ

ಘಟನೆಗೆ ಕಾರ್ಖಾನೆ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕಾರ್ಮಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಆಡಳಿತ ವಿಫಲವಾಗಿದೆ ಎಂದು ಅವರು ದೂರಿದ್ದಾರೆ.

ವಿವಿಧ ಸಂಘಟನೆಗಳೂ ಪ್ರತಿಭಟನೆಗೆ ಬೆಂಬಲ ಸೂಚಿಸಿವೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಕಾರ್ಖಾನೆ ಮುಂಭಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಯಾದಗಿರಿಯಲ್ಲೂ ಇಂತಹುದೇ ಘಟನೆ

ಇದಕ್ಕೂ ಮೊದಲು ಯಾದಗಿರಿಯಲ್ಲೂ ಇಂತಹುದೇ ಘಟನೆ ನಡೆದಿತ್ತು. ಬುಧವಾರ ರಾಸಾಯನಿಕ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದರು. ಕಡೆಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಸಲ್ಫರ್ ಡೈಆಕ್ಸೈಡ್ (Sulphur Dioxide) ಎಂದು ಶಂಕಿಸಲಾದ ರಾಸಾಯನಿಕ ಸೋರಿಕೆಯಾದ ಪರಿಣಾಮ ಈ ದುರಂತ ಸಂಭವಿಸಿತ್ತು.

ಮೃತರನ್ನು ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ನಿವಾಸಿ ಕಟ್ಲ ಗಣೇಶ್ ಹಾಗೂ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ನಿವಾಸಿಗಳಾದ ವಿಕ್ರಮ್ ಸಿಂಗ್ ಗೋಂಡಾ ಮತ್ತು ಸಂಜಯ್ ಸಿಂಗ್ ಗೋಂಡಾ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಿವಾಸಿಗಳಾದ ಮಂಚಲ ಹೆಮಂತ್ ಮತ್ತು ಮಂಚಲ ಶಿವಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Worker dies after falling into hot water pit at sugar factory in Mandya
ಯಲ್ಲಾಪುರದಲ್ಲಿ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: ಭಾರೀ ಪ್ರಮಾಣದ ವನ್ಯಜೀವಿ ವಸ್ತುಗಳ ವಶ, ಇಬ್ಬರ ಬಂಧನ! Video

ರಾಸಾಯನಿಕ ಸೋರಿಕೆಯಿಂದ ದುರಂತ

ಮಂಗಳವಾರ ಮುಂಜಾನೆ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾದ ಬಳಿಕ ಈ ಘಟನೆ ಸಂಭವಿಸಿದೆ. ಘಟನೆ ಬೆನ್ನಲ್ಲೇ ಕಾರ್ಖಾನೆಯ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಮಾಹಿತಿ ನೀಡಿ, ಮುಂಜಾನೆ ವೇಳೆ ಸಲ್ಫರ್ ಡೈಆಕ್ಸೈಡ್ ಆಗಿರುವ ಸಾಧ್ಯತೆಯಿರುವ ರಾಸಾಯನಿಕ ಸೋರಿಕೆಯಾಗಿದ್ದು, ಇದರಿಂದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಗಾಯಗೊಂಡ ಇಬ್ಬರು ಕಾರ್ಮಿಕರನ್ನು ರಾಯಚೂರು ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮಂಡ್ಯ ಹಾಗೂ ಯಾದಗಿರಿಯಲ್ಲಿ ನಡೆದ ಈ ಎರಡು ಪ್ರತ್ಯೇಕ ಕೈಗಾರಿಕಾ ದುರಂತಗಳು ಕಾರ್ಖಾನೆಗಳಲ್ಲಿ ಕಾರ್ಮಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com