2028ರ ಚುನಾವಣೆಗೆ BJP ರಣತಂತ್ರ: ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಸಜ್ಜು..!

ಕಾಂಗ್ರೆಸ್‌ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಗುರುವಾರ ಬಳ್ಳಾರಿಯಲ್ಲಿ ಅಂತ್ಯಗೊಳ್ಳಲಿದೆ. ಆದರೆ, ಪಾದಯಾತ್ರೆ ಮುಕ್ತಾಯದೊಂದಿಗೆ ಹೋರಾಟ ಅಂತ್ಯವಾಗುವುದಿಲ್ಲ.
BJP state president BY Vijayendra and other leaders during the Ballari Chalo padayatra on Wednesday.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Updated on

ಬಳ್ಳಾರಿ: 2028ರ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ನಡೆಯುತ್ತಿರುವ ಬಿಜೆಪಿ ಪಾದಯಾತ್ರೆಯ ಹಿನ್ನೆಲೆಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರ ಮಾರ್ಗದರ್ಶನದಲ್ಲಿ ಪಕ್ಷ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ವಿರುದ್ಧ ಹೋರಾಡಲು ಪಕ್ಷದ ವಿವಿಧ ಹಂತಗಳ ನಾಯಕತ್ವ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಗುರುವಾರ ಬಳ್ಳಾರಿಯಲ್ಲಿ ಅಂತ್ಯಗೊಳ್ಳಲಿದೆ. ಆದರೆ, ಪಾದಯಾತ್ರೆ ಮುಕ್ತಾಯದೊಂದಿಗೆ ಹೋರಾಟ ಅಂತ್ಯವಾಗುವುದಿಲ್ಲ. ಇದು ಕೇವಲ ಆರಂಭವಷ್ಟೇ. ಕರ್ನಾಟಕದ ಜನರಲ್ಲಿ ಹೊಸ ಭರವಸೆಯ ಕಿರಣ ಮೂಡಿಸಿರುವ ಈ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

BJP state president BY Vijayendra and other leaders during the Ballari Chalo padayatra on Wednesday.
ಬಳ್ಳಾರಿ ಚಲೋ ಸಮಾರೋಪ: ಬಿಜೆಪಿ ಸಮಾವೇಶಕ್ಕೆ ಶಾಲಾ ಮೈದಾನ ನೀಡಲು ಸರ್ಕಾರದ ನಕಾರ!; 'ಜಾಗ ಹೇಗೆ ಕೊಡಲ್ಲ ನೋಡ್ತೀವಿ' ಎಂದು ವಿಜಯೇಂದ್ರ ಸವಾಲು

ಇದೇ ವೇಳೆ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಆದರೆ, ಕಾನೂನು ಮತ್ತು ಸುವ್ಯವಸ್ಥೆಯ ನೆಪದಲ್ಲಿ ರಾಜ್ಯ ಸರ್ಕಾರ ಪಾದಯಾತ್ರೆಗೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದರು.

ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ಸರ್ಕಾರ ನಮ್ಮನ್ನು ಕಿರುಕುಳ ನೀಡುತ್ತಿದೆ. ಬಿಜೆಪಿ ಬ್ಯಾನರ್‌ಗಳನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಅಧಿಕಾರಿಗಳು ಸರ್ಕಾರದ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com