ಸತೀಶ್‌ ಜಾರಕಿಹೊಳಿ ಕುಟುಂಬದ ಮೇಲೆ ED ದಾಳಿ: ‘ರಾಜಕೀಯ ಸೇಡಿನ ಕ್ರಮದಿಂದ ನಮ್ಮನ್ನು ಕುಗ್ಗಿಸಲು ಸಾಧ್ಯವಿಲ್ಲ’; ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ತನಿಖಾ ಸಂಸ್ಥೆಗಳು ನಿಜವಾಗಿಯೂ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿವೆಯೇ ಅಥವಾ ರಾಜಕೀಯ ಅಸ್ತ್ರಗಳಾಗಿ ಬಳಸಲಾಗುತ್ತಿವೆಯೇ ಎಂದು ಪ್ರಶ್ನಿಸಿದ್ದಾರೆ.
 Satish Jarkiholi
ಸತೀಶ್ ಜಾರಕಿಹೊಳಿ
Updated on

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ರಾಜ್ಯದ ಸಚಿವರು ಹಾಗೂ ಹಿರಿಯ ಕಾಂಗ್ರೆಸ್‌ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿಬಿಐ, ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ.) ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರಗಳಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, ಸತೀಶ್‌ ಜಾರಕಿಹೊಳಿ ಹಾಗೂ ಅವರ ಕುಟುಂಬದ ಮೇಲೆ ನಡೆದಿರುವ ಇ.ಡಿ. ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದ್ದಾರೆ.

2015-16ರಿಂದ 2025ರ ಫೆಬ್ರವರಿವರೆಗೆ ರಾಜಕೀಯ ನಾಯಕರು ಹಾಗೂ ಪ್ರತಿಪಕ್ಷಗಳಿಗೆ ಸೇರಿದವರ ವಿರುದ್ಧ ಇ.ಡಿ. 193 ಪ್ರಕರಣಗಳನ್ನು ದಾಖಲಿಸಿದ್ದು, ಈ ಪೈಕಿ ಕೇವಲ ಎರಡು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆ ಆಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ತನಿಖಾ ಸಂಸ್ಥೆಗಳು ನಿಜವಾಗಿಯೂ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿವೆಯೇ ಅಥವಾ ರಾಜಕೀಯ ಅಸ್ತ್ರಗಳಾಗಿ ಬಳಸಲಾಗುತ್ತಿವೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, “ದಾಳಿ, ಸಮನ್ಸ್‌, ಬಂಧನ, ಪ್ರಧಾನ ಸಮಯದ ಸುದ್ದಿಗಳು, ರಾಜಕೀಯ ಕೆಸರೆರಚಾಟ... ಸುಮಾರು ಒಂದು ದಶಕದ ಬಳಿಕ ಸಿಕ್ಕಿದ್ದು ಕೇವಲ ಎರಡು ಶಿಕ್ಷೆಗಳು” ಎಂದು ಹೇಳಿದ್ದಾರೆ.

ಸಚಿವ ಟಿ. ರಘುಮೂರ್ತಿ ಮಾತನಾಡಿ, ಬಿಜೆಪಿಗೆ ವಿರುದ್ಧವಾಗಿರುವ ರಾಜಕೀಯ ಪಕ್ಷಗಳ ನಾಯಕರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳನ್ನು ಕ್ರಮೇಣ ರಾಜಕೀಯ ಅಸ್ತ್ರಗಳಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದರು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಅವರು ಪ್ರತಿಕ್ರಿಯಿಸಿ. ರಾಜಕೀಯ ದ್ವೇಷಕ್ಕಾಗಿ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಹಿರಂಗವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

 Satish Jarkiholi
Watch | ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ; ಡಿಕೆಶಿ, ಪ್ರಿಯಾಂಕ್ ಖರ್ಗೆ ಫಸ್ಟ್ ರಿಯಾಕ್ಷನ್!

ಇದು ನಮಗೆ ಹೊಸದೇನಲ್ಲ. 2014ರಿಂದಲೇ ಕಾಂಗ್ರೆಸ್‌ ನಾಯಕರನ್ನು ಗುರಿಯಾಗಿಸಿಕೊಂಡು ಕ್ರಮ ಕೈಗೊಳ್ಳುವುದು ಅಸಮರ್ಥ ಕೇಂದ್ರ ಸರ್ಕಾರದ ನಿರಂತರ ಚಟುವಟಿಕೆಯಾಗಿದೆ. ಇದು ಸಂದೇಶ ಸ್ಪಷ್ಟವಾಗಿದೆ. ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ, ವಿಚಾರಣೆಗೊಳಪಡಿಸಲಾಗುತ್ತಿದೆ, ಕಿರುಕುಳ ನೀಡಲಾಗುತ್ತಿದೆ. ಆದರೆ ಆಡಳಿತದಲ್ಲಿರುವವರು ಯಾವುದೇ ಕ್ರಮಕ್ಕೆ ಒಳಗಾಗುತ್ತಿಲ್ಲ. ಇ.ಡಿ. ಕಾನೂನಿನ ಸಂಸ್ಥೆಯಾಗಿರಬೇಕು, ಕೇಂದ್ರ ಸರ್ಕಾರದ ಕೈಗೊಂಬೆಯಾಗಬಾರದು ಎಂದು ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಮಾತನಾಡಿ, ಮೋದಿ ಸರ್ಕಾರ ಕಾಂಗ್ರೆಸ್‌ ನಾಯಕರ ವಿರುದ್ಧ ನಡೆಸುತ್ತಿರುವ ರಾಜಕೀಯ ಪ್ರೇರಿತ ‘ಮಾಟಗಾತಿ ಬೇಟೆ’ ಹಳೆಯ ಕಥೆಯಾಗಿದ್ದು, ಇದರಿಂದ ಕಾಂಗ್ರೆಸ್‌ ನಾಯಕರು ಹೆದರುವುದಿಲ್ಲ ಅಥವಾ ಬೆದರಲು ಸಾಧ್ಯವಿಲ್ಲ ಎಂದು ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ-ಜನತಾ ದಳದ ಕುಸಿದ ರಾಜಕೀಯದ ಅವಧಿಯಲ್ಲಿ ನಡೆದ ರಾಜಕೀಯ ಪ್ರೇರಿತ ತನಿಖೆಗಳ ಪಟ್ಟಿಯೇ ಎಲ್ಲವನ್ನೂ ಹೇಳುತ್ತದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಅವರ ಸಹೋದರ ಡಿ.ಕೆ. ಸುರೇಶ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ಸಚಿವ ಜಮೀರ್‌ ಅಹ್ಮದ್‌, ಸಂಸದ ತುಕಾರಾಂ, ಶಾಸಕ ಎನ್‌.ಎ. ಹ್ಯಾರಿಸ್‌ ಸೇರಿದಂತೆ ಹಲವು ನಾಯಕರ ಮೇಲೆ ಇ.ಡಿ. ದಾಳಿ ನಡೆದಿದೆ.

ಇದೇ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ನಾಯಕ ಎಂ.ಪಿ. ರೇಣುಕಾಚಾರ್ಯ ಹಾಗೂ ಶಾಸಕ ಜನಾರ್ದನ ರೆಡ್ಡಿ ವಿರುದ್ಧದ ವಿಚಾರಣೆಗೆ ಅನುಮತಿ ನೀಡುವ ಪ್ರಸ್ತಾವನೆಗಳು ರಾಜ್ಯಪಾಲರ ಮುಂದೆ ಬಾಕಿ ಉಳಿದಿವೆ” ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com