ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ: ಎರಡನೇ ಅಧಿಕೃತ ಭಾಷೆಯಾಗಿ 'ತುಳು' ಘೋಷಿಸಿ; ಸಿಎಂಗೆ ಸುನೀಲ್ ಕುಮಾರ್ ಮನವಿ

ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಮಹಾ ಮಸ್ತಕಾಭಿಷೇಕಕ್ಕೆ 2027ರ ಫೆಬ್ರವರಿ 18ರಿಂದ ಹತ್ತು ದಿನಗಳ ಕಾಲ ನಡೆಯಲಿದ್ದು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಯಾತ್ರಾರ್ಥಿ ಗಳು, ಮತ್ತು ಪ್ರವಾಸಿಗರು ಆಗಮಿಸಲಿದ್ದಾರೆ.
ಡಿಕೆ ಶಿವಕುಮಾರ್ ಭೇಟಿಯಾದ ಶಾಸಕ ಸುನೀಲ್ ಕುಮಾರ್
ಡಿಕೆ ಶಿವಕುಮಾರ್ ಭೇಟಿಯಾದ ಶಾಸಕ ಸುನೀಲ್ ಕುಮಾರ್
Updated on

ಬೆಂಗಳೂರು: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮುಂಬರುವ ಐತಿಹಾಸಿಕ ಶ್ರೀಗೊಮ್ಮಟೇಶ್ವರಸ್ವಾಮಿಯ ಮಹಾಮಸ್ತಕಾಭಿಷೇಕದ ಸಿದ್ಧತೆ ಕುರಿತು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್, ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದರು.

ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಮಹಾ ಮಸ್ತಕಾಭಿಷೇಕಕ್ಕೆ 2027ರ ಫೆಬ್ರವರಿ 18ರಿಂದ ಹತ್ತು ದಿನಗಳ ಕಾಲ ನಡೆಯಲಿದ್ದು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಯಾತ್ರಾರ್ಥಿ ಗಳು, ಮತ್ತು ಪ್ರವಾಸಿಗರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು.

ಮಂಗಳೂರಿನಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಸಮಗ್ರ ಹಾಗೂ ದೀರ್ಘಕಾಲಿಕ ಅಭಿವೃದ್ಧಿಗೆ ಪೂರಕವಾದ ಶಾಶ್ವತ ಯೋಜನೆಗಳನ್ನು ರೂಪಿಸುವಂತೆ ಶಾಸಕ ವಿ. ಸುನಿಲ್ ಕುಮಾರ್, ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಹಲವು ಪ್ರಮುಖ ವಿಷಯಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದು ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳಿಗೆ ರಾಜ್ಯ ಸರಕಾರದಿಂದ ಸೂಕ್ತ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಭೇಟಿಯಾದ ಶಾಸಕ ಸುನೀಲ್ ಕುಮಾರ್
ಸಬ್ಸಿಡಿಗಳ ಮೇಲೆ ಅವಲಂಬಿತವಾಗುವಂತೆ ಮಾಡಿ ಜನರನ್ನು 'ಕನಸಿಲ್ಲದ ಹಾದಿ'ಯಲ್ಲಿ ನಡೆಸುತ್ತಿದ್ದೀರಿ: ಸುನೀಲ್ ಕುಮಾರ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com