

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) 2021-22ರಿಂದ 2025-26ನೇ ಸಾಲಿನ ಜುಲೈ ಪ್ರವೇಶ ಅವಧಿಯಲ್ಲಿ CBCS ಅಲ್ಲದ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಹಾಗೂ 2021-22ರಿಂದ 2025-26ನೇ ಶೈಕ್ಷಣಿಕ ಸಾಲಿನ ಜುಲೈ/ಜನವರಿ ಪ್ರವೇಶ ಅವಧಿಯಲ್ಲಿ CBCS ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಿದೆ.
ದಂಡ ಶುಲ್ಕವಿಲ್ಲದೆ ಪರೀಕ್ಷಾ ಶುಲ್ಕ ಪಾವತಿಸಲು ಸೆಪ್ಟೆಂಬರ್ 18 ಕೊನೆಯ ದಿನಾಂಕವಾಗಿದೆ. 200 ರೂಪಾಯಿ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಸೆಪ್ಟೆಂಬರ್ 25 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗೆ ಬೆಂಗಳೂರು ಪ್ರಾದೇಶಿಕ ಕೇಂದ್ರ-01ರ ಪ್ರಾದೇಶಿಕ ನಿರ್ದೇಶಕರನ್ನು ಸಂಪರ್ಕಿಸಬಹುದು. ವಿಳಾಸ: ಕೆಎಸ್‌ಆರ್‌ಟಿಸಿ ಸ್ಯಾಟಲೈಟ್ ಬಸ್ ನಿಲ್ದಾಣದ ಮೊದಲ ಮಹಡಿ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು. ದೂರವಾಣಿ: 080-26603664.