'ಅಮೆರಿಕ ಅಧ್ಯಕ್ಷರೂ ಕೂಡ ಕಾಪಿ ಮಾಡುತ್ತಿದ್ದಾರೆ': ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಕೆ ಶಿವಕುಮಾರ್, Video

ಕಾಂಗ್ರೆಸ್‌ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳು ದೊಡ್ಡ ಮಟ್ಟದಲ್ಲಿ ಜನಮನ್ನಣೆ ಗಳಿಸಿವೆ' ಎಂದು ಹೇಳಿದರು.
CM DK Shivakumar
ಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಭರ್ಜರಿ ಯಶಸ್ಸು ಕಂಡಿವೆ ಎಂದು ಬಣ್ಣಿಸಿದ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, “ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕೂಡ ನಮ್ಮನ್ನೇ ಕಾಪಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಮಾಜಿ‌ ಶಾಸಕ ನೆ.ಲ. ನರೇಂದ್ರಬಾಬು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, 'ಕಾಂಗ್ರೆಸ್‌ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳು ದೊಡ್ಡ ಮಟ್ಟದಲ್ಲಿ ಜನಮನ್ನಣೆ ಗಳಿಸಿವೆ' ಎಂದು ಹೇಳಿದರು.

ರಿಪಬ್ಲಿಕನ್‌ ಪಕ್ಷವು ಪ್ರತಿನಿಧಿ ಸಭೆ ಮತ್ತು ಸೆನೆಟ್‌ ಮೇಲಿನ ನಿಯಂತ್ರಣವನ್ನು ಉಳಿಸಿಕೊಂಡರೆ, ಅಮೆರಿಕದ ಪ್ರತಿಯೊಬ್ಬ ವಯಸ್ಕ ನಾಗರಿಕನಿಗೂ 5,000 ಡಾಲರ್‌ ನೀಡುವುದಾಗಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇತ್ತೀಚೆಗೆ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್‌ ಅವರು ಟ್ರಂಪ್‌ ಅವರ ಘೋಷಣೆಯನ್ನು ಕರ್ನಾಟಕದ ಗ್ಯಾರಂಟಿ ಯೋಜನೆಗಳಿಗೆ ಹೋಲಿಕೆ ಮಾಡಿದ್ದಾರೆ.

CM DK Shivakumar
ಮುಂದಿನ ದಿನಗಳಲ್ಲಿ ರಾಜ್ಯ ತೀವ್ರ ಬರಗಾಲ, ನೀರು ಮತ್ತು ವಿದ್ಯುತ್‌ ಕೊರತೆ ಎದುರಿಸಲಿದೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್

ದೇಶದ ಹಲವು ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ

"ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದವು. ಆದರೆ ಇಂದು ನಾವು ಗ್ಯಾರಂಟಿಗಳಿಂದಲೇ ದೇಶಕ್ಕೆ ಮಾದರಿಯಾಗಿದ್ದೇವೆ. ಬಿಹಾರ, ಮಧ್ಯಪ್ರದೇಶ, ಉತ್ತರ ಪ್ರದೇಶ ಹೀಗೆ ಎಲ್ಲಾ ಕಡೆ ಕರ್ನಾಟಕ ಮಾದರಿ ನಕಲು ಮಾಡಿದರು. ಈಗ ಅಮೇರಿಕಾದ ಟ್ರಂಪ್ ಕೂಡ ನಕಲು ಮಾಡುತ್ತಿದ್ದಾರೆ. ನನಗೆ ಮತ ಹಾಕಿ, ಡಾಲರ್ ನೀಡುತ್ತೇನೆ ಎಂದು ಹೇಳುತ್ತಿದ್ದಾರೆ. ನಮ್ಮ ಆಲೋಚನೆ ಇಡೀ ವಿಶ್ವಕ್ಕೆ ಪರಿಚಯವಾಗುತ್ತಿದೆ" ಎಂದರು.

ಗ್ಯಾರಂಟಿ ಯೋಜನೆಗಳನ್ನು ಎಲ್ಲಾ ಪಕ್ಷ, ಜಾತಿಗಳಿಗೂ ನೀಡುತ್ತಿದ್ದೇವೆ. 4.44 ಕೋಟಿ ಜನರಿಗೆ ಅನ್ನಭಾಗ್ಯ ನೀಡುತ್ತಿದ್ದೇವೆ. ಅದಕ್ಕೆ ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿ, ಇತಿಹಾಸ" ಎಂದರು.

"ಅಸ್ಸಾಂ ರಾಜ್ಯದಲ್ಲಿ ಕೆಲವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದಾರೆ. ಎಸ್ ಸಿಪಿ, ಟಿಎಸ್ ಪಿ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ವಿದ್ಯಾರ್ಥಿಗಳಿಗೆ ಬಸ್ ಪಾಸ್ ಉಚಿತವಾಗಿ ನೀಡಲಾಗುತ್ತಿದೆ. ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಪ್ರಜಾಸೇವೆ ಮಾಡುತ್ತಿದ್ದೇವೆ. ಇದನ್ನು ಶಾಸಕರು ಹೇಗೆ ಬಳಸಿಕೊಳ್ಳುತ್ತಾರೋ ತಿಳಿದಿಲ್ಲ. ನಾನಂತೂ ಆದಷ್ಟು ಯಶಸ್ವಿಗೊಳಿಸುವೆ" ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com