

ಬೆಳಗಾವಿ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಸ್ಥಳೀಯ ವಿನಯ್ ಜೋಗೆನ್ನವರ ಹಾಗೂ ಆಕಾಶ ಜಾಧವ ಎಂದು ಗುರುತಿಸಲಾಗಿದೆ. ಮತ್ತೋರ್ವ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸಾರಿಗೆ ಬಸ್ ಬಸವಕಲ್ಯಾಣದಿಂದ ಹುಬ್ಬಳ್ಳಿ ಕಡಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ದ್ವಿಚಕ್ರ ವಾಹನ ಬಸ್ ಗೆ ಡಿಕ್ಕಿ ಹೊಡೆದು ಕೆಳಗೆ ನುಗ್ಗಿದೆ. ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.