ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಒಂದೇ ಕುಟುಂಬದ ಮೂವರಿಗೆ ಎದುರಾಯ್ತು ಮೃತ್ಯುರೂಪಿ ಟ್ಯಾಂಕರ್!

Tragic Accident In Mandya: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಕ್ಕೆ ಬಂದಿದ್ದ ಮೂವರು ವಾಪಸ್ ಹೊರಡುವಾಗ ತಾವು ಚಲಿಸುತ್ತಿದ್ದ ಸ್ಕೂಟರ್‌ಗೆ ಕೊಪ್ಪ ಗ್ರಾಮದ ಬಳಿ ಹಾಲಿನ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Tragic Accident In Mandya
ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತOnline Desk
Updated on

ಕೊಪ್ಪ (ಮಂಡ್ಯ): ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಕ್ಕೆ ಬಂದಿದ್ದ ಮೂವರು ವಾಪಸ್ ಬೆಂಗಳೂರಿಗೆ ಹೊರಡುವಾಗ ತಾವು ಚಲಿಸುತ್ತಿದ್ದ ಸ್ಕೂಟರ್‌ಗೆ ಕೊಪ್ಪ ಗ್ರಾಮದ ಬಳಿ ಹಾಲಿನ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಕೊಪ್ಪ ಗ್ರಾಮದ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಅವರು ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಕ್ಕೆ ಬಂದಿದ್ದರು. ಅದರಂತೆ, ಈ ಕುಟುಂಬ, ಹಬ್ಬ ಮುಗಿಸಿ ಮರಳಿ ಬೆಂಗಳೂರಿಗೆ ಹೊರಟಿದ್ದಾಗ ಇಂದು ಮುಂಜಾನೆ ಅವರು ಪ್ರಯಾಣಿಸುತ್ತಿದ್ದ ಸ್ಕೂಟರ್‌ಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಬಳಿ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಟ್ಯಾಂಕರ್ ಚಕ್ರಗಳು ಇವರ ಮೇಲೆಯೇ ಹರಿದಿದ್ದರಿಂದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿನ್ನೆ ಅದ್ದೂರಿಯಾಗಿ ಗಣಪತಿ ಹಬ್ಬ ಅಚ್ಚರಿಸಿದ್ದ ಕುಟುಂಬವು ಇಂದು ಮುಂಜಾನೆ ಬೇಗ ಬಿಟ್ಟರೆ ಇಂದೇ ಸರಿಯಾದ ಸಮಯಕ್ಕೆ ಕೆಲಸಕ್ಕೆ ಹೋಗಬಹುದು ಅಂದು ಕೊಂಡಿದ್ದಾರೆನೋ . ಹಾಗಾಗಿ, ಅಷ್ಟೊತ್ತಿಗೇನೆ ಮನೆ ಬಿಟ್ಟಿದ್ದಾರೆ. ಆದ್ರೆ, ವಿಧಿಯಾಟ ಬೇರೆಯೇ ಇತ್ತು. ಇನ್ನು, ಮೃತರ ಪೈಕಿ ಒಂದು ಪುಟ್ಟ ಮಗು ಕೂಡ ಇತ್ತು ಎನ್ನಲಾಗಿದೆ. ಈ ಮೂಲಕ  ಗಣಪತಿ ಹಬ್ಬದ ಸಂಭ್ರಮಕ್ಕಾಗಿ ಊರಿಗೆ ಬಂದಿದ್ದ ಕುಟುಂಬದಲ್ಲಿ ಈ ದುರಂತ ಸಂಭವಿಸಿರುವುದು ಇಡೀ ಕೊಪ್ಪ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸುವಂತೆ ಮಾಡಿದೆ

Tragic Accident In Mandya
ಬೆಳಗಾವಿ: ಬೈಕ್- ಸಾರಿಗೆ ಬಸ್ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com