ಉಮರ್ ಖಾಲಿದ್ ‘ರಾಷ್ಟ್ರವಾದಿ’; ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕು ABVPಗೆ ಇಲ್ಲ: ಬಿ.ಕೆ. ಹರಿಪ್ರಸಾದ್; Video

ಉಮರ್ ಖಾಲಿದ್ ಒಬ್ಬ ರಾಷ್ಟ್ರವಾದಿ. ನಾಥೂರಾಮ್ ಗೋಡ್ಸೆಯನ್ನು ಆರಾಧಿಸುವ ಎಬಿವಿಪಿಗೆ ಅವರ ಬಗ್ಗೆ ಮಾತನಾಡುವ ಯಾವುದೇ ಹಕ್ಕಿಲ್ಲ. ಗೋಡ್ಸೆ ದೇಶವಿರೋಧಿ ಮತ್ತು ದೇಶದ ಮೊದಲ ಭಯೋತ್ಪಾದಕ. ಹೀಗಾಗಿ ಎಬಿವಿಪಿಗೆ ಈ ವಿಚಾರದಲ್ಲಿ ನೈತಿಕ ಹಕ್ಕೇ ಇಲ್ಲ ಎಂದು ಹರಿಪ್ರಸಾದ್ ಸುದ್ದಿಗಾರರಿಗೆ ತಿಳಿಸಿದರು.
B K Hariprasad and Umar Khalid(File photo)
ಬಿ ಕೆ ಹರಿಪ್ರಸಾದ್, ಉಮರ್ ಖಾಲಿದ್ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಅವರನ್ನು “ರಾಷ್ಟ್ರವಾದಿ” ಎಂದು ಬಣ್ಣಿಸಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU)ನಲ್ಲಿ ಅವರ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿದ ಆರ್‌ಎಸ್‌ಎಸ್‌ ಅಂಗಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉಮರ್ ಖಾಲಿದ್ ಒಬ್ಬ ರಾಷ್ಟ್ರವಾದಿ. ನಾಥೂರಾಮ್ ಗೋಡ್ಸೆಯನ್ನು ಆರಾಧಿಸುವ ಎಬಿವಿಪಿಗೆ ಅವರ ಬಗ್ಗೆ ಮಾತನಾಡುವ ಯಾವುದೇ ಹಕ್ಕಿಲ್ಲ. ಗೋಡ್ಸೆ ದೇಶವಿರೋಧಿ ಮತ್ತು ದೇಶದ ಮೊದಲ ಭಯೋತ್ಪಾದಕ. ಹೀಗಾಗಿ ಎಬಿವಿಪಿಗೆ ಈ ವಿಚಾರದಲ್ಲಿ ನೈತಿಕ ಹಕ್ಕೇ ಇಲ್ಲ ಎಂದು ಹರಿಪ್ರಸಾದ್ ಸುದ್ದಿಗಾರರಿಗೆ ತಿಳಿಸಿದರು.

ಲಲಿತ್ ವಚಾನಿ ನಿರ್ದೇಶಿಸಿರುವ ‘Prisoner No 626710 is Present’ ಸಾಕ್ಷ್ಯಚಿತ್ರದ ಪ್ರದರ್ಶನದ ಕುರಿತು ನಡೆಯುತ್ತಿರುವ ವಿವಾದದ ನಡುವೆಯೇ ಹರಿಪ್ರಸಾದ್ ಈ ಹೇಳಿಕೆ ನೀಡಿದ್ದಾರೆ.

B K Hariprasad and Umar Khalid(File photo)
'ಕಾಂಗ್ರೆಸ್ ಪಕ್ಷದ ಸ್ವತಂತ್ರ ಪೂರ್ವ ಹೋರಾಟದ 25 % ಕಲಿತುಕೊಂಡ್ರೆ ಖಾಕಿ ಚಡ್ಡಿ, ಕರಿ ಟೋಪಿ, ಕೈಯಲ್ಲಿ ದೊಣ್ಣೆ ಹಿಡ್ಕೊಂಡೋರು ಊರು ಬಿಟ್ಟು ಓಡಿ ಹೋಗ್ತಾರೆ': ಬಿ ಕೆ ಹರಿಪ್ರಸಾದ್

ಉಮರ್ ಖಾಲಿದ್ ಅವರನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ಸಾಕ್ಷ್ಯಚಿತ್ರವನ್ನು ಎನ್‌ಎಲ್‌ಎಸ್‌ಐಯುನಲ್ಲಿ ಪ್ರದರ್ಶಿಸಲು ಉದ್ದೇಶಿಸಲಾಗಿತ್ತು. ಆದರೆ ಬಳಿಕ ಪ್ರದರ್ಶನವನ್ನು ಮುಂದೂಡಲಾಗಿದೆ.

ಸುರಕ್ಷಿತ ಮತ್ತು ಜವಾಬ್ದಾರಿಯುತ ರೀತಿಯಲ್ಲಿ ಪ್ರದರ್ಶನ ನಡೆಸಲು ಸಾಧ್ಯವಾಗುವಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ. ಪ್ರಸಕ್ತ ಶೈಕ್ಷಣಿಕ ತ್ರೈಮಾಸಿಕದಲ್ಲೇ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದೂ ಅದು ಹೇಳಿದೆ.

ಪೂರ್ವವಿಚಾರಣಾ ಬಂಧನ, ಜಾಮೀನು, ಭಿನ್ನಮತ, ರಾಜಕೀಯ ಬಂಧನ ಹಾಗೂ ಕ್ರಿಮಿನಲ್ ಕಾನೂನು ಮತ್ತು ಪ್ರಜಾಸತ್ತಾತ್ಮಕ ಸ್ವಾತಂತ್ರ್ಯಗಳ ನಡುವಿನ ಸಂಬಂಧ ಕುರಿತ ವಿಸ್ತೃತ ಚರ್ಚೆಯ ಭಾಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಎಂದು ಎನ್‌ಎಲ್‌ಎಸ್‌ಐಯು ತಿಳಿಸಿದೆ.

2020ರ ಸೆಪ್ಟೆಂಬರ್‌ನಿಂದ ಉಮರ್ ಖಾಲಿದ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. 2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ದೊಡ್ಡ ಪಿತೂರಿ ಪ್ರಕರಣದಲ್ಲಿ ದೆಹಲಿ ಪೊಲೀಸರು ಅವರನ್ನು ಬಂಧಿಸಿದ್ದರು. ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (UAPA) ಸೇರಿದಂತೆ ವಿವಿಧ ಕಾನೂನುಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮ್ಮ ವಿರುದ್ಧದ ಆರೋಪಗಳನ್ನು ಖಾಲಿದ್ ನಿರಾಕರಿಸಿದ್ದಾರೆ.

B K Hariprasad and Umar Khalid(File photo)
'RSS-ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ; ನನ್ನ ಹೇಳಿಕೆಗೆ ಗಟಾರದಲ್ಲಿ ಬಿದ್ದು ಹೊರಳಾಡಿದ್ದ ಬಾಡಿಗೆ ದೇಶಭಕ್ತರ ನಾಲಿಗೆಗೆ ನಾಗಪುರದಿಂದ ಬೀಗ ಬಿದ್ದಿದೆಯೇ?'

ಸಾಕ್ಷ್ಯಚಿತ್ರ ಪ್ರದರ್ಶನ ರದ್ದುಗೊಳಿಸಲು ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಈ ನಡುವೆ, ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರದ ಪ್ರಸ್ತಾವಿತ ಪ್ರದರ್ಶನವನ್ನು ಶಾಶ್ವತವಾಗಿ ರದ್ದುಗೊಳಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಎಬಿವಿಪಿ ಮನವಿ ಮಾಡಿದೆ. ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಎನ್‌ಎಲ್‌ಎಸ್‌ಐಯು ಆಡಳಿತದ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸುವಂತೆಯೂ ಅದು ಒತ್ತಾಯಿಸಿದೆ.

ಹೇಳಿಕೆಯಲ್ಲಿ ಎಬಿವಿಪಿಯ ಬೆಂಗಳೂರು ಘಟಕವು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಮನವಿ ಸಲ್ಲಿಸಿ ಮಧ್ಯಪ್ರವೇಶಿಸುವಂತೆ ಕೋರಿರುವುದಾಗಿ ತಿಳಿಸಿದೆ.

ಪ್ರದರ್ಶನವನ್ನು ಮುಂದೂಡಿರುವುದು ಸಾರ್ವಜನಿಕರ ಆಕ್ರೋಶ ತಣ್ಣಗಾಗುವವರೆಗೆ ಕಾಲಹರಣ ಮಾಡುವ ತಂತ್ರವಾಗಿದೆ ಎಂದು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ. ಖಾಲಿದ್ ಅವರನ್ನು ಕೇಂದ್ರವಾಗಿಟ್ಟುಕೊಂಡು ಅದು “ರಾಜಕೀಯ ಪ್ರಚಾರ” ಎಂದು ಬಣ್ಣಿಸಿರುವ ಚಟುವಟಿಕೆಗಳಿಗೆ ರಾಷ್ಟ್ರೀಯ ಪ್ರಾಮುಖ್ಯತೆಯ ಶಿಕ್ಷಣ ಸಂಸ್ಥೆಗಳು ವೇದಿಕೆಯಾಗಬಾರದು ಎಂದು ಎಬಿವಿಪಿ ಹೇಳಿದೆ.

B K Hariprasad and Umar Khalid(File photo)
ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ರಂತೆ ನಾನೂ ರಾಜಕೀಯ ಸಂಚಿಗೆ ಬಲಿ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌

ಸಾಕ್ಷ್ಯಚಿತ್ರವನ್ನು ಕ್ಯಾಂಪಸ್‌ನಲ್ಲಿ ಚಿತ್ರೀಕರಿಸಲು, ಪ್ರದರ್ಶಿಸಲು ಅಥವಾ ಪ್ರಚಾರ ಮಾಡಲು ನೀಡಿರುವ ಎಲ್ಲ ಅನುಮತಿಗಳನ್ನು ಶಾಶ್ವತವಾಗಿ ಹಿಂಪಡೆಯುವಂತೆ ಎನ್‌ಎಲ್‌ಎಸ್‌ಐಯುಗೆ ನಿರ್ದೇಶನ ನೀಡಬೇಕೆಂದು ಎಬಿವಿಪಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಕಾರ್ಯಕ್ರಮಕ್ಕೆ ಅನುಮತಿ ನೀಡಿದ ವಿಶ್ವವಿದ್ಯಾಲಯ ಆಡಳಿತ ಮತ್ತು ಆಯೋಜನಾ ಸಮಿತಿಯ ವಿರುದ್ಧವೂ ತನಿಖೆ ನಡೆಸುವಂತೆ ಕೋರಿದೆ.

ಶೈಕ್ಷಣಿಕ ಸ್ವಾತಂತ್ರ್ಯ ಮತ್ತು ಮುಕ್ತ ಚರ್ಚೆ ಸಂವಿಧಾನಾತ್ಮಕ ಹಕ್ಕುಗಳಾಗಿವೆ ಎಂದು ಒಪ್ಪಿಕೊಂಡಿರುವ ಎಬಿವಿಪಿ, ಆದರೆ ರಾಷ್ಟ್ರೀಯ ಭದ್ರತೆ, ಸಾರ್ವಭೌಮತೆ ಮತ್ತು ಸಂಸ್ಥೆಯ ಸಮಗ್ರತೆಗಿಂತ ಅಭಿವ್ಯಕ್ತಿ ಸ್ವಾತಂತ್ರ್ಯ ಮೇಲುಗೈ ಸಾಧಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಎನ್‌ಎಲ್‌ಎಸ್‌ಐಯು, ವ್ಯವಸ್ಥಾಪನಾ ಮತ್ತು ಭದ್ರತಾ ಕಾರಣಗಳಿಗಾಗಿ ಕಾರ್ಯಕ್ರಮವನ್ನು ಮರುನಿಗದಿಪಡಿಸಲಾಗಿದೆ ಎಂದು ತಿಳಿಸಿದೆ. ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ಒತ್ತಡದಿಂದ ಕಾರ್ಯಕ್ರಮವನ್ನು ಕೈಬಿಟ್ಟಿಲ್ಲ ಎಂದೂ ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com