ನವದಂಪತಿ ಜಾಲಿ ರೈಡ್‌ ವೇಳೆ ಅಪಘಾತ: ತುಮಕೂರಿನಲ್ಲಿ ಹಿಟ್‌ ರನ್‌ಗೆ ಇಬ್ಬರು ಬಲಿ!

ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಉಷಾರಾಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
Usharani and darshan
ಅಪಘಾತಕ್ಕೆ ಬಲಿಯಾದ ದರ್ಶನ್ ಮತ್ತು ಉಷಾರಾಣಿ
Updated on

ತುಮಕೂರು: ಹಿಟ್ ಅಂಡ್ ರನ್‌ಗೆ ನವದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಮೇಲೆ ನಡೆದಿದೆ.

ತುಮಕೂರಿನ ಶಿರಾ ತಾಲೂಕಿನ ದ್ವಾರಾಳು ಸೇತುವೆ ಬಳಿ ಬೈಕ್‌ನಲ್ಲಿ ಬೆಂಗಳೂರಿನತ್ತ ತೆರಳುವ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದಾಗಿ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ದರ್ಶನ್‌ ಹಾಗೂ ಉಷಾರಾಣಿ ಮೃತರು.

ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಉಷಾರಾಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿ ಹೊಡೆದ ವಾಹನಕ್ಕಾಗಿ ಹುಡುಕಾಟ ನಡೆದಿದೆ. ಬಾಳಿ ಬದುಕಬೇಕಾಗಿದ್ದ ಜೋಡಿ ಮೃತಪಟ್ಟಿರುವುದನ್ನು ಕಂಡು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

Usharani and darshan
ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಒಂದೇ ಕುಟುಂಬದ ಮೂವರಿಗೆ ಎದುರಾಯ್ತು ಮೃತ್ಯುರೂಪಿ ಟ್ಯಾಂಕರ್!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com