ಅತಿದೊಡ್ಡ ಲೋಕಾಯುಕ್ತ ದಾಳಿ: ಭೂ ದಾಖಲೆ ತಿದ್ದುಪಡಿಗೆ ಬರೋಬ್ಬರಿ 50 ಲಕ್ಷ ರೂ.ಲಂಚ; ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರ್!

ಲೋಕಾಯುಕ್ತ ಎಸ್.ಪಿ.ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ಮಾಡಿತು.ಈ ವೇಳೆ ದೂರುದಾರರು ಕೂಡ ಅವರ ಜೊತೆಗೆ ಇದ್ದರು.
ತಹಶೀಲ್ದಾರ್ ಸಚ್ಚಿದಾನಂದ
ತಹಶೀಲ್ದಾರ್ ಸಚ್ಚಿದಾನಂದ
Updated on

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50 ಲಕ್ಷ ರೂ. ಲಂಚ ಪಡೆಯುವಾಗ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಧಾರವಾಡ-ಕಲಘಟಗಿ ಮಧ್ಯೆ ಇರುವ ಯರಿಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿರುವ 33 ಎಕರೆ ಪೈಕಿ 13 ಎಕರೆ ಭೂಮಿ ಖರಾಬು ಇತ್ತು. ಇದನ್ನು ಮಾರ್ಪಾಟು ಮಾಡಿಕೊಡಲು 50 ಲಕ್ಷ ರೂ. ಲಂಚ ಮತ್ತು ಅದೇ ಭೂಮಿಯ ಪೈಕಿ 2 ಎಕರೆ ಜಮೀನು ನುಂಗಲು ತಹಶೀಲ್ದಾರ್ ಹೊಂಚು ಹಾಕಿದ್ದರು ಎನ್ನಲಾಗಿದೆ.

ಲೋಕಾಯುಕ್ತ ಎಸ್.ಪಿ.ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ಮಾಡಿತು.ಈ ವೇಳೆ ದೂರುದಾರರು ಕೂಡ ಅವರ ಜೊತೆಗೆ ಇದ್ದರು. ಡಿಎಸ್ ಪಿ ರವೀಂದ್ರ ಕುರುಬಗಟ್ಟಿ, ಇನ್ಸಪೆಕ್ಟರ್ ಪ್ರಸಾದ್, ಕರುಣೇಶಗೌಡ, ಪ್ರಸಾದ ಪಾನೇಕರ್ ಸೇರಿದಂತೆ ಇತರರು ಭ್ರಷ್ಟ ತಹಶೀಲ್ದಾರ್ ಬೇಟೆಯಾಡಿದ್ದಾರೆ.

ಬಾಗಲಕೋಟೆಯ ಮಂಜುನಾಥ ಅರಳಿಕಟ್ಟಿ ಎಂಬುವವರು ಧಾರವಾಡದ ಯರಿಕೊಪ್ಪ ಹದ್ದಿನಲ್ಲಿ ಖರೀದಿಸಿದ್ದ ಜಮೀನಿನ ಖರಾಬು ಪಹಣಿ ಸರಿಪಡಿಸಲು ಈ ಲಂಚಕ್ಕೆ ತಹಶೀಲ್ದಾರ ಬೇಡಿಕಿ ಇಟ್ಟಿದ್ದರು ಎನ್ನಲಾಗಿದೆ. ಬುಧವಾರ ರಾತ್ರಿ ಕರ್ನಾಟಕ ಕಾಲೇಜು ಆವರಣದಲ್ಲಿಯೇ ಈ ಲಂಚ ಪಡೆಯುವಾಗ ಸಚ್ಚಿದಾನಂದ ಕುಚನೂರು ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಸಚ್ಚಿದಾನಂದ ಕುಚನೂರ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ತಹಶೀಲ್ದಾರ್ ಸಚ್ಚಿದಾನಂದ
ಸರ್ಕಾರಿ ಶಾಲೆಯ ಛಾವಣಿ ಬಿದ್ದು ಮಕ್ಕಳಿಗೆ ಗಾಯ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕರ್ನಾಟಕ ಲೋಕಾಯುಕ್ತ!

ಜಮೀನು ದಾಖಲೆ ಸರಿಪಡಿಸಿಕೊಡುವ ವಿಷಯಕ್ಕೆ ಸಂಬಂಧಿಸಿದಂತೆ 50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ, ಕಚೇರಿಯಲ್ಲಿ ಸತ್ಯನಾರಾಯಣ ಪೂಜೆ ಇಟ್ಟುಕೊಂಡಿದ್ದರು. ಪೂಜೆಯ ಜೊತೆಗೆ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಸಹ ಆಯೋಜಿಸಲಾಗಿತ್ತು. ಅನ್ನ ಸಂತರ್ಪಣೆಗಾಗಿ ಕಚೇರಿಯಲ್ಲಿ ಭರದ ಸಿದ್ಧತೆ ನಡೆದಿತ್ತು. ರಾತ್ರಿಯೇ ಅಡುಗೆ ಮಾಡಲು ಬಟ್ಟರು ಬಂದಿದ್ದರು. ಸುಮಾರು ಎರಡು ಸಾವಿರ ಜನರಿಗೆ ಅಡುಗೆ ಸಿದ್ದವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com