ರೈತರ ಹಿತಾಸಕ್ತಿ ಕಾಪಾಡಲು ಬದ್ಧ; ಕಸ್ತೂರಿರಂಗನ್ ಸಮಿತಿ ವರದಿ ಕುರಿತು ನಾಳೆ ನಿರ್ಣಯ ಅಂಗೀಕಾರ: ಸಿಎಂ ಡಿಕೆ ಶಿವಕುಮಾರ್; Video

ಇಂದು ಭಾನುವಾರ ಸಕಲೇಶಪುರದಲ್ಲಿ ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿಯ ಶಿಫಾರಸುಗಳ ಕುರಿತು ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್, ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
D K Shivakumar
ಹಾಸನದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್
Updated on

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರಿಗೆ ಭರವಸೆ ನೀಡಿದ್ದು, ಭೂಮಿ ಮಂಜೂರಾತಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ಸರ್ಕಾರ ಪ್ರಯತ್ನಿಸಲಿದೆ. ರೈತರ ಹಿತದೃಷ್ಟಿಯಿಂದ ಅಗತ್ಯವಿದ್ದರೆ ಕಾನೂನುಗಳಿಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದರು. ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದ ವಿಚಾರದಲ್ಲಿ ಸರ್ವಪಕ್ಷಗಳ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿಗೆ ಕರೆದೊಯ್ಯುವುದಾಗಿಯೂ ಅವರು ಭರವಸೆ ನೀಡಿದರು.

ಇಂದು ಭಾನುವಾರ ಸಕಲೇಶಪುರದಲ್ಲಿ ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿಯ ಶಿಫಾರಸುಗಳ ಕುರಿತು ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್, ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

D K Shivakumar
'ಸಂಭಾವ್ಯ ಅನಾಹುತಗಳ ಬಗ್ಗೆ ಜನರು ನನ್ನ ಗಮನಕ್ಕೆ ತಂದಿದ್ದಾರೆ': ವಿಶೇಷ ಅಧಿವೇಶನಕ್ಕೂ ಮುನ್ನ ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ಸಿಎಂ ; Video

ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿಯ ನಡುವೆ ಸಮತೋಲನ ಸಾಧಿಸುವ ಉದ್ದೇಶದಿಂದ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ಸೇರಿದಂತೆ ಆರು ರಾಜ್ಯಗಳಾದ್ಯಂತ ಸುಮಾರು 60,000 ಚದರ ಕಿ.ಮೀ. ವ್ಯಾಪ್ತಿಯ ಪಶ್ಚಿಮ ಘಟ್ಟಗಳ ಶೇ.37ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವಂತೆ ಕಸ್ತೂರಿರಂಗನ್ ಸಮಿತಿ ಶಿಫಾರಸು ಮಾಡಿತ್ತು.

ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಹೆಬ್ರಿಗೆ ಹಾಗೂ ನಿನ್ನೆ ಶನಿವಾರ ಶಿವಮೊಗ್ಗ ಮತ್ತು ಚಿಕ್ಕಮಗಳೂರಿಗೆ ಭೇಟಿ ನೀಡಿ ಅಲ್ಲಿನ ಜನರ ಅಭಿಪ್ರಾಯಗಳನ್ನು ಆಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com