ರೈತರನ್ನು ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ, ರೈತರಿಗೆ ಯಾವುದೇ ಹೊಸ ನೋಟಿಸ್ ನೀಡಲ್ಲ; ಡಿ.ಕೆ. ಶಿವಕುಮಾರ್

ಸರ್ಕಾರ ಜನರ ಮನೆಗಳಿಗೆ ತೆರಳಿ, ಅವರೊಂದಿಗೆ ಚರ್ಚೆ ನಡೆಸಲಿದೆ. ಬಳಿಕ ವಿಶೇಷ ಅಧಿವೇಶನ ಕರೆದು ಸ್ಥಳೀಯ ಶಾಸಕರು ಹಾಗೂ ಇತರ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದುಕೊಂಡ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.
Dk Shivakumar
ಡಿ.ಕೆ ಶಿವಕುಮಾರ್
Updated on

ಶಿವಮೊಗ್ಗ: ರೈತರಿಗೆ ಹೊಸದಾಗಿ ಯಾವುದೇ ನೋಟಿಸ್ ನೀಡದಂತೆ ಹಾಗೂ ಯಾವುದೇ ಹೊಸ ಒತ್ತುವರಿಗೆ ಅವಕಾಶ ನೀಡದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ತಿಳಿಸಿದ್ದಾರೆ.

ಮಲೆನಾಡು ಪ್ರದೇಶದ ಕಸ್ತೂರಿರಂಗನ್ ವರದಿಯಿಂದ ಉಂಟಾಗಿರುವ ಪರಿಣಾಮ ಹಾಗೂ ಜನರ ಆತಂಕಗಳ ಕುರಿತು ಚರ್ಚಿಸಲು ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಸಂವಾದ ಮತ್ತು ಸಾರ್ವಜನಿಕ ಸಭೆಯಲ್ಲಿ ಡಿಕೆ. ಶಿವಕುಮಾರ್ ಅವರು ಮಾತನಾಡಿದರು. ಸಭೆಯಲ್ಲಿ ಸ್ಥಳೀಯ ರೈತರು, ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

ಏನೇ ಆಗಲಿ, ನಾವು ಭೂಮಿಯನ್ನು ರಕ್ಷಿಸಬೇಕು. ಭೂಮಿ ಮತ್ತು ಪರಿಸರದೊಂದಿಗೆ ನಮಗೂ ನಂಟಿದೆ ಎಂದು ಹೇಳಿದರು.

ಸರ್ಕಾರ ಜನರ ಮನೆಗಳಿಗೆ ತೆರಳಿ, ಅವರೊಂದಿಗೆ ಚರ್ಚೆ ನಡೆಸಲಿದೆ. ಬಳಿಕ ವಿಶೇಷ ಅಧಿವೇಶನ ಕರೆದು ಸ್ಥಳೀಯ ಶಾಸಕರು ಹಾಗೂ ಇತರ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದುಕೊಂಡ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ರೈತರನ್ನು ಯಾವುದೇ ಕಾರಣಕ್ಕೂ ತಮ್ಮ ಭೂಮಿಯಿಂದ ವಲಸೆ ಹೋಗುವಂತೆ ಒತ್ತಾಯಿಸಬಾರದು ಎಂದು ತಿಳಿಸಿದರು.

ಮಲೆನಾಡು ಪ್ರದೇಶದ ಪರಿಸರ ಪ್ರವಾಸೋದ್ಯಮ ಹಾಗೂ 364 ಕಿಲೋಮೀಟರ್ ಉದ್ದದ ಕರಾವಳಿ ಪ್ರದೇಶವನ್ನು ಒಳಗೊಂಡಂತೆ ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

Dk Shivakumar
ವಂದೇ ಮಾತರಂ ವಿವಾದ: ಜನರ ಬದುಕು ಬದಿಗಿಟ್ಟು ರಾಜಕೀಯ ಮಾಡಬಾರದು; ಚನ್ನಬಸಪ್ಪ ಹೇಳಿಕೆಗೆ ಡಿಕೆಶಿ ತಿರುಗೇಟು

‘ಬಗರ್ ಹುಕುಂ’ ಅಡಿಯಲ್ಲಿ ಭೂಮಿ ಹಕ್ಕುಗಳು ಹಾಗೂ ಸಾಗುವಳಿದಾರರಿಗೆ ಭೂಮಿ ಹಕ್ಕುಗಳನ್ನು ನೀಡುವ ಕ್ರಮವನ್ನು ತಮ್ಮ ಸರ್ಕಾರ ಕೈಗೊಂಡಿದೆ. ಅಡಿಕೆ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡುವುದಾಗಿ ಹೇಳಿದರು.

94ಸಿ ಅಡಿಯಲ್ಲಿ ಎದುರಾಗಿರುವ ಸಮಸ್ಯೆಗಳ ಕುರಿತು ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದರು. ಭೌತಿಕ ಸಮೀಕ್ಷೆ ಸೇರಿದಂತೆ ಇತರ ವಿಚಾರಗಳ ಕುರಿತು ಶಾಸಕರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಮಾತನಾಡಿ, ಮಲೆನಾಡಿನ ಜನರ ಸಮಸ್ಯೆಗಳನ್ನು ಸರ್ಕಾರ ಪರಿಹರಿಸಲಿದೆ. ಅರಣ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶರಾವತಿ ಯೋಜನೆಯಿಂದ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲೂ ಸರ್ಕಾರ ಪ್ರಯತ್ನಿಸಲಿದೆ ಎಂದು ತಿಳಿಸಿದರು.

ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಮಾನವ-ವನ್ಯಜೀವಿ ಸಂಘರ್ಷ ಸೇರಿದಂತೆ ಅರಣ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸರ್ಕಾರ ಚರ್ಚೆ ನಡೆಸಲಿದೆ. ಶರಾವತಿ ಯೋಜನೆಯಿಂದ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಭೂಮಿ ಹಕ್ಕು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕುಗಳ 400ಕ್ಕೂ ಹೆಚ್ಚು ಗ್ರಾಮಗಳು ಪ್ರಸ್ತಾವಿತ ಪರಿಸರ ಸೂಕ್ಷ್ಮ ಪ್ರದೇಶ ಅಧಿಸೂಚನೆಯ ವ್ಯಾಪ್ತಿಗೆ ಒಳಪಡುತ್ತವೆ ಎಂದು ಹೇಳಿದರು.

ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಗಾಡ್ಗಿಲ್ ಮತ್ತು ಕಸ್ತೂರಿರಂಗನ್ ವರದಿಗಳಿಂದ ಉದ್ಭವಿಸಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯಕ್ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕೂಡ ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com