5 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ!

ಲಂಚದ ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
Bajpe inspector caught by Lokayukta
ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್ ಬಾಲಕೃಷ್ಣ
Updated on

ಮಂಗಳೂರು: ಲಂಚದ ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ವಂಚನೆ ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಹಣ ಬಿಡುಗಡೆಗಾಗಿ ಬಾಲಕೃಷ್ಣ 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮೊದಲ ಕಂತಿನಲ್ಲಿ 15 ಸಾವಿರಕ್ಕೆ ಲಂಚ ಪಡೆದಿದ್ದ ಬಾಲಕೃಷ್ಣ ಇಂದು 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ. ಸದ್ಯ ಬಾಲಕೃಷ್ಣರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Bajpe inspector caught by Lokayukta
ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ; ನಾಲ್ವರಿಗೆ ಗಂಭೀರ ಗಾಯ

ತುಮಕೂರು: ಗಣೇಶ ವಿಸರ್ಜನೆ ವೇಳೆ 'ನೀನು ಕೀಳು ಜಾತಿ' ಎಂದು ಹೀಯಾಳಿಸಿ ಹಲ್ಲೆ, ಯುವಕ ಸಾವು!

ತುಮಕೂರಿನ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಯುವಕನೋರ್ವನ ಕೊಲೆಯಾಗಿದೆ. ಮೃತನನ್ನು ಮಾದಿಗ ಸಮುದಾಯದ 17 ವರ್ಷದ ಸಿಂಹಾದ್ರಿ ಎಂದು ಗುರುತಿಸಲಾಗಿದೆ. ಮಗನ ಸಾವಿನ ವಿಚಾರ ತಿಳಿದು ತಾಯಿ ಅನ್ನಪೂರ್ಣ ಅಸ್ವಸ್ಥರಾಗಿದ್ದು ತುಮಕೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಣೇಶ ವಿಸರ್ಜನಾ ಕಾರ್ಯಕ್ರಮದ ವೇಳೆ ನಾಯಕ ಸಮುದಾಯದ ಮಾರುತೇಶ್ (24) ಎಂಬಾತ ಸಿಂಹಾದ್ರಿಗೆ ನೀನು ಕೀಳು ಜಾತಿಯವ ನಿಂದಿಸಿ, ಬಳಿಕ ಕಲ್ಲಿನಿಂದ ಹಲ್ಲೆ ನಡೆಸಿದ್ದು ಭೀಕರವಾಗಿ ಗಾಯಗೊಂಡಿದ್ದ ಸಿಂಹಾದ್ರಿ ಮೃತಪಟ್ಟಿದ್ದಾನೆ. ಡಾನ್ಸ್ ವಿಚಾರವಗಿ ಕೊಲೆ ನಡೆದಿದೆ ಎಂದು ಯುವಕನ ಪೋಷಕರು ಆರೋಪಿಸಿದ್ದಾರೆ. ಘಟನೆ ಬಗ್ಗೆ ತಾಯಿ ಅನ್ನಪೂರ್ಣ ಅವರ ದೂರಿನ ಅನ್ವಯ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com