ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!

ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಗಲ್ಲಿಯೊಂದರ ಶೆಡ್‌ವೊಂದರಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ ಅಗ್ನಿ ದುರಂತದ ಕೆಲ ದಿನಗಳ ನಂತರ ಲಭ್ಯವಾದ CCTV ದೃಶ್ಯಾವಳಿಯು, ಈ ದುರಂತಕ್ಕೆ ಹೊಸ ತಿರುವು ಕೊಟ್ಟಿದೆ.
ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!
Updated on

ಬೆಳಗಾವಿ: ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಗಲ್ಲಿಯೊಂದರ ಶೆಡ್‌ವೊಂದರಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ ಅಗ್ನಿ ದುರಂತದ ಕೆಲ ದಿನಗಳ ನಂತರ ಲಭ್ಯವಾದ CCTV ದೃಶ್ಯಾವಳಿಯು, ಈ ದುರಂತಕ್ಕೆ ಹೊಸ ತಿರುವು ಕೊಟ್ಟಿದೆ. TNIE ಜೊತೆ ಮಾತನಾಡಿದ ಬೆಳಗಾವಿ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಮ್ ಅವರು, ಪ್ರಕರಣದಲ್ಲಿನ ಸಂಭಾವ್ಯ ತಿರುವಿನ ವಿವರಗಳನ್ನು ಬಹಿರಂಗಪಡಿಸಲಿಲ್ಲ. ಆದರೂ ತನಿಖೆಯ ವೇಳೆ ಪೊಲೀಸರಿಗೆ ಪ್ರಮುಖ ಸುಳಿವುಗಳು ಸಿಕ್ಕಿವೆ. ಮುಂದಿನ ಕೆಲವೇ ದಿನಗಳಲ್ಲಿ ಪ್ರಕರಣವನ್ನು ಭೇದಿಸುತ್ತೇವೆ ಎಂದು ಹೇಳಿದರು.

ದಾಮೋನೆ ಕುಟುಂಬದ ಆರು ಸದಸ್ಯರು ಬೆಂಕಿಗೆ ಆಹುತಿಯಾದ ಶೆಡ್‌ನ ಸುತ್ತಮುತ್ತಲಿನ ಗಲ್ಲಿಯ ಹಲವಾರು CCTV ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದು ಸಾವಿಗೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ CCTV ದೃಶ್ಯಾವಳಿಯಲ್ಲಿ ಸೆಪ್ಟೆಂಬರ್ 15ರಂದು ನಸುಕಿನ ಜಾವ 2 ಗಂಟೆಗೆ ಬೆಂಕಿ ಕಾಣಿಸಿಕೊಳ್ಳುವ ಎರಡು ನಿಮಿಷಗಳ ಮೊದಲು ಅಪರಿಚಿತ ವ್ಯಕ್ತಿಯೊಬ್ಬ ಕೈಯಲ್ಲಿ ಬಕೆಟ್ ಹಿಡಿದುಕೊಂಡು ಆ ಶೆಡ್‌ನತ್ತ ಅನುಮಾನಾಸ್ಪದವಾಗಿ ನಡೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದೆ. ಕೆಲ ನಿಮಿಷಗಳಲ್ಲೇ ಬಕೆಟ್ ಬಿಟ್ಟು ಓಡಿ ಹೋಗುತ್ತಿರುವ ದೃಶ್ಯಗಳು ಈ ಘಟನೆಯು ಉದ್ದೇಶಪೂರ್ವಕ ಕೃತ್ಯವೇ ಎಂಬ ಕೋನದಲ್ಲಿ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!
5 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ!

ಆ ವ್ಯಕ್ತಿ ಅಲ್ಲಿಂದ ತೆರಳಿದ ಎರಡು ನಿಮಿಷಗಳಲ್ಲೇ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ. ಮನೆಯ ಸಮೀಪವಿದ್ದ ಆ ಎರಡು ನಿಮಿಷಗಳಲ್ಲಿ ಆ ವ್ಯಕ್ತಿ ಏನು ಮಾಡಿದನು? ಆತ ಹೊತ್ತೊಯ್ಯುತ್ತಿದ್ದ ಬಕೆಟ್‌ನಲ್ಲಿ ಏನಿದ್ದಿರಬಹುದು? ಮತ್ತು ಆತ ಅದನ್ನು ಏಕೆ ಅಲ್ಲಿ ಬಿಟ್ಟುಹೋದ? ಎಂಬಂತಹ ಹಲವಾರು ಪ್ರಶ್ನೆಗಳನ್ನು ಈ CCTV ದೃಶ್ಯಾವಳಿಯು ತನಿಖಾಧಿಕಾರಿಗಳ ಮುಂದೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದರು.

ಕುಟುಂಬದ ಆರು ಸದಸ್ಯರ ಸಾವಿನಲ್ಲಿ ಆ ಅಪರಿಚಿತ ವ್ಯಕ್ತಿಗೆ ಏನಾದರೂ ಪಾತ್ರವಿದೆಯೇ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಹಾಗೂ ಆತನನ್ನು ಗುರುತಿಸಿ ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಕಿ ಆಕಸ್ಮಿಕವಾಗಿ ಸಂಭವಿಸಿದೆಯೇ ಅಥವಾ ಉದ್ದೇಶಪೂರ್ವಕವಾಗಿ ಹಚ್ಚಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ದೃಶ್ಯಾವಳಿಗಳು ಮತ್ತು ಲಭ್ಯವಿರುವ ಇತರ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com