ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ವಿರುದ್ಧ FIR ದಾಖಲು..!

ಟಿ. ನರಸೀಪುರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯನ್ನು ಖಂಡಿಸಿ ನಡೆದ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು.
Pratap Simha
ಪ್ರತಾಪ್ ಸಿಂಹ
Updated on

ಮೈಸೂರು: ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರ ವಿರುದ್ಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಟಿ. ನರಸೀಪುರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯನ್ನು ಖಂಡಿಸಿ ನಡೆದ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 132, 191, 194, 196(1)(ಎ)(ಬಿ), 299, 353(1)(ಬಿ)(ಸಿ) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಸೇವಕರು ಹಾಗೂ ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪ, ವಿವಿಧ ಗುಂಪುಗಳು ಮತ್ತು ಜಾತಿಗಳ ನಡುವೆ ದ್ವೇಷ ಉತ್ತೇಜಿಸಿದ ಆರೋಪ, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮಾಡಿದ ಆರೋಪ, ಪ್ರಚೋದನಕಾರಿ ಭಾಷಣ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Pratap Simha
ಟಿ ನರಸೀಪುರ ಗಣೇಶ ಶೋಭಾಯಾತ್ರೆ: ಸಿಡಿದೆದ್ದ ಕಾಂಗ್ರೆಸ್; ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಮೈಸೂರು SPಗೆ ದೂರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com