ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಮೂವರ ಸಾವು, Video

ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಪಿಕ್‌ಅಪ್ ಜೀಪ್, ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Serial accident near anekadu on Kushalnagar-Madikeri highway
ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ
Updated on

ಮಡಿಕೇರಿ: ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಪಿಕ್‌ಅಪ್ ಜೀಪ್, ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.

ಮೃತರನ್ನು ಹೊಸಕೋಟೆಯ ನಿವಾಸಿ, ಎಲೆಕ್ಟ್ರಿಷಿಯನ್ ರತನ್ ಅಲಿಯಾಸ್ ಉನ್ನಿ (36), ಅವರ ಸಹೋದ್ಯೋಗಿ ಆದರ್ಶ್ (26) ಹಾಗೂ ಹೊದ್ದೂರು ಗ್ರಾಮದ ನಿವಾಸಿ, ಅರಣ್ಯ ಇಲಾಖೆಯ ಗುತ್ತಿಗೆ ನೌಕರ ಕುಮಾರ್ (42) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೂಡಲೇ ಸ್ಥಳೀಯರು ಅವರ ನೆರವಿಗೆ ಧಾವಿಸಿ ಮಾನವೀಯತೆ ಮೆರೆದಿದ್ದಾರೆ. ಅಪಘಾತದಲ್ಲಿ ಒಟ್ಟು 7 ಮಂದಿಗೆ ಗಾಯಗಳಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸುವಿನ್, ಚಂದ್ರಶೇಖರ್, ಆದರ್ಶ್ ಮತ್ತು ಅಜಯ್ ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.

Serial accident near anekadu on Kushalnagar-Madikeri highway
ಮಲ್ಲಮ್ಮನನ್ನು Bigg Boss ಮನೆಗೆ ಕಳುಹಿಸಲು ನೆರವಾಗಿದ್ದ ಡಿಸೈನರ್ ಪಲ್ಲವಿ ಇನ್ನಿಲ್ಲ..!

ಆಗಿದ್ದೇನು?

ಮಾಹಿತಿ ಪ್ರಕಾರ, ಗುಡ್ಡೆಹೊಸೂರುನಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರಿನಲ್ಲಿ ಹೊಸಕೋಟೆಗೆ ವಾಪಸ್ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರನ್ನು ಉನ್ನಿ ಚಲಾಯಿಸುತ್ತಿದ್ದರು. ಓವರ್‌ಟೇಕ್ ಮಾಡಲು ಮುಂದಾದ ವೇಳೆ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಬಳಿಕ ಅದೇ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಪಿಕಪ್ ವಾಹನಕ್ಕೂ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಉನ್ನಿ ಹಾಗೂ ಆದರ್ಶ್ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಪಿಕಪ್ ವಾಹನದಲ್ಲಿದ್ದವರಿಗೂ ಗಾಯಗಳಾಗಿವೆ. ಗಾಯಾಳುಗಳಿಗೆ ಮೊದಲು ಕುಶಾಲನಗರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಹಾಗೂ ಮಡಿಕೇರಿಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟಿದ್ದು, ಕಾರು ಹಾಗೂ ಪಿಕಪ್ ವಾಹನಗಳು ತೀವ್ರವಾಗಿ ಹಾನಿಗೊಳಗಾಗಿವೆ. ಈ ಸಂಬಂಧ ಕುಶಾಲನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com