ರಾಜ್ಯದ ಹಲವೆಡೆ ವರುಣನ ಆರ್ಭಟ: ಬೆಂಗಳೂರು ಸೇರಿ ಪ್ರಮುಖ ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ!

ಬಂಗಾಳ ಕೊಲ್ಲಿಯ ಪೂರ್ವ ಮಧ್ಯ ಹಾಗೂ ಪಶ್ಚಿಮ ಮಧ್ಯ ಭಾಗದಲ್ಲಿ ಉಂಟಾಗಿರುವ ಗುರುತಿಸಲ್ಪಟ್ಟ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರಿನಲ್ಲಿ ಸೋಮವಾರ ಸಂಜೆ 5.30ರವರೆಗೆ 16.6 ಮಿ.ಮೀ ಮಳೆಯಾಗಿದ್ದು, ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡು ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.

File photo
ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರೈತರು ಸಾವು!

ಬಂಗಾಳ ಕೊಲ್ಲಿಯ ಪೂರ್ವ ಮಧ್ಯ ಹಾಗೂ ಪಶ್ಚಿಮ ಮಧ್ಯ ಭಾಗದಲ್ಲಿ ಉಂಟಾಗಿರುವ ಗುರುತಿಸಲ್ಪಟ್ಟ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ವಾಯುಭಾರ ಕುಸಿತ ಮುಂದಿನ ದಿನಗಳಲ್ಲಿ ತೀವ್ರ ವಾಯುಭಾರ ಕುಸಿತವಾಗಿ ರೂಪುಗೊಳ್ಳುವ ಸಾಧ್ಯತೆಯೂ ಇದೆ. ಇದರ ಜೊತೆಗೆ, ಮಧ್ಯ ತಮಿಳುನಾಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇಲ್ಮೈಯಿಂದ ಮೇಲ್ಮಟ್ಟದವರೆಗೆ ಚಂಡಮಾರುತದ ಪರಿಚಲನೆ ಇದೆ. ಆಗ್ನೇಯ ಅರಬ್ಬಿ ಸಮುದ್ರದಲ್ಲೂ ಹವಾಮಾನ ವ್ಯವಸ್ಥೆಯೊಂದು ರೂಪುಗೊಂಡಿದ್ದು, ಕೇರಳ, ತಮಿಳುನಾಡು ಹಾಗೂ ನೈಋತ್ಯ ಬಂಗಾಳ ಕೊಲ್ಲಿಯ ಭಾಗದಲ್ಲಿ ಗುರುತಿಸಲ್ಪಟ್ಟ ವಾಯುಭಾರ ಕುಸಿತ ಕಂಡುಬಂದಿದೆ.

ಈ ಎಲ್ಲ ಹವಾಮಾನ ವ್ಯವಸ್ಥೆಗಳ ಪ್ರಭಾವದಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com