ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ ಹಾಕಿದ್ದ ಇನ್ಸ್‌ಪೆಕ್ಟರ್‌ ಧನಂಜಯ್‌ಗೆ ಮತ್ತೊಂದು ಸಂಕಷ್ಟ; ಪೊಲೀಸ್ ವರಿಷ್ಠಾಧಿಕಾರಿಗೆ ದೂರು

ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರಕ್ಕೆ ಧಮ್ಕಿ ಹಾಕಿದ್ದ ಇನ್ಸ್‌ಪೆಕ್ಟರ್‌ ಧನಂಜಯ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಧನಂಜಯ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
Snehamayi-Krishna, Dhananjay
ಸ್ನೇಹಮಯಿ ಕೃಷ್ಣ, ಧನಂಜಯ್
Updated on

ಮೈಸೂರು: ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರಕ್ಕೆ ಧಮ್ಕಿ ಹಾಕಿದ್ದ ಇನ್ಸ್‌ಪೆಕ್ಟರ್‌ ಧನಂಜಯ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಧನಂಜಯ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಪ್ರಭಾವ ಬಳಸಿ ತಮ್ಮ ವರ್ಗಾವಣೆ ಆದೇಶವನ್ನು ರದ್ದುಪಡಿಸಿಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಒಂದೇ ದಿನದಲ್ಲಿ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ, ಅದೇ ಠಾಣೆಯಲ್ಲಿ ಮುಂದುವರೆದಿದ್ದಾರೆ ಎಂದು ಆರೋಪಿಸಿದ್ದು ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ದೂರುದಾರ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

Snehamayi-Krishna, Dhananjay
ಬೆಂಗಳೂರಿನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಪತ್ತೆ; ಏಳು ಮಂದಿ ಬಂಧನ, ಐದು ನಾಡಬಂದೂಕು ವಶ

ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ಧಮ್ಕಿ ಹಾಕಿದ್ದ ವಿಡಿಯೋ ರಾಜ್ಯ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು. ಅಲ್ಲದೆ ಬಿಜೆಪಿ ನಾಯಕರು ಟಿ. ನರಸೀಪುರದಲ್ಲಿ ದೊಡ್ಡ ಪ್ರತಿಭಟನೆ ನಡೆಸಿದ್ದರು. ಈ ಘಟನೆಯಿಂದ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಟಿ. ನರಸೀಪುರದಲ್ಲಿ ಅದ್ಧೂರಿಯಾಗಿ ಗಣಪತಿ ವಿಸರ್ಜನಾ ಮೆರವಣೆಗೆಯನ್ನು ಮಾಡಿದ್ದರು.

ಇನ್ನು ಸ್ನೇಹಮಯಿ ಕೃಷ್ಣ ತಮ್ಮ ದೂರಿನಲ್ಲಿ ಇನ್ಸ್‌ಪೆಕ್ಟರ್ ಧನಂಜಯ್ ಸಮಾಜದಲ್ಲಿ ಅಶಾಂತಿಗೆ ಕಾರಣರಾಗಿದ್ದು ಧರ್ಮಗಳ ನಡುವೆ ದ್ವೇಷ ಮೂಡಿಸುವಂತೆ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com