ವಂದೇ ಮಾತರಂ ಗೀತೆ ವಿವಾದ: 2 ಚರಣಕ್ಕೆ ಸೀಮಿತಗೊಳಿಸಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ಗರಂ; CM ಡಿ.ಕೆ.ಶಿವಕುಮಾರ್'ಗೆ ಪತ್ರ, ಆದೇಶ ಮರುಪರಿಶೀಲನೆಗೆ ಸೂಚನೆ..!

ವಂದೇ ಮಾತರಂ’ನ ಅಧಿಕೃತ ಆವೃತ್ತಿಯನ್ನು ಕೇಂದ್ರ ಗೃಹ ಸಚಿವಾಲಯ ನಿಗದಿಪಡಿಸಿದ್ದು, ರಾಷ್ಟ್ರೀಯ ಗೀತೆ ಹಾಗೂ ರಾಷ್ಟ್ರಗಾನಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ರಾಜ್ಯ ಸರ್ಕಾರಗಳೂ ಈ ಮಾರ್ಗಸೂಚಿಗಳನ್ನು ಪಾಲಿಸಬೇಕು.
Governor of Karnataka
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
Updated on

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನಾಲ್ಕು ಪುಟಗಳ ಪತ್ರ ಬರೆದಿರುವ ರಾಜ್ಯಪಾಲರು, ರಾಜ್ಯ ಸರ್ಕಾರದ ಆದೇಶವನ್ನು ಮರುಪರಿಶೀಲಿಸುವಂತೆ ಸೂಚಿಸಿದ್ದಾರೆ.

‘ವಂದೇ ಮಾತರಂ’ ಕುರಿತು ರಾಜ್ಯ ಸರ್ಕಾರದ ನಿರ್ಧಾರವು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ರಾಜ್ಯಪಾಲರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಂವಿಧಾನಾತ್ಮಕ ಅಂಶಗಳು ಹಾಗೂ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಪರಿಗಣಿಸಿ, ರಾಜ್ಯ ಸರ್ಕಾರ ತನ್ನ ಆದೇಶವನ್ನು ಮರುಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

‘ವಂದೇ ಮಾತರಂ’ನ ಅಧಿಕೃತ ಆವೃತ್ತಿಯನ್ನು ಕೇಂದ್ರ ಗೃಹ ಸಚಿವಾಲಯ ನಿಗದಿಪಡಿಸಿದ್ದು, ರಾಷ್ಟ್ರೀಯ ಗೀತೆ ಹಾಗೂ ರಾಷ್ಟ್ರಗಾನಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ರಾಜ್ಯ ಸರ್ಕಾರಗಳೂ ಈ ಮಾರ್ಗಸೂಚಿಗಳನ್ನು ಪಾಲಿಸಬೇಕು.

ಸಾಮೂಹಿಕ ಗಾಯನದ ಸಂದರ್ಭದಲ್ಲೂ ‘ವಂದೇ ಮಾತರಂ’ನ ಅಧಿಕೃತ ಆವೃತ್ತಿಯನ್ನೇ ಹಾಡಬೇಕು ಎಂದು ಕೇಂದ್ರದ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ರಾಜ್ಯ ಸರ್ಕಾರದ ಕಾರ್ಯಕ್ರಮಗಳಿಗಾಗಿ ಪ್ರತ್ಯೇಕವಾಗಿ ಸಂಕ್ಷಿಪ್ತ ಅಥವಾ ಬದಲಾದ ಆವೃತ್ತಿಯನ್ನು ನಿಗದಿಪಡಿಸಲು ಅವಕಾಶವಿಲ್ಲ.

Governor of Karnataka
ಸಭಾಪತಿ ಪೀಠ ಸಂವಿಧಾನದ್ದೋ, ಕಾಂಗ್ರೆಸ್‌ದ್ದೋ?; ಪರಿಷತ್‌ನಲ್ಲಿ ‘ವಂದೇ ಮಾತರಂ’ ಎರಡು ಚರಣ ಹಾಡಿ ನಿಲ್ಲಿಸಿದ ರಾಜ್ಯ ಸರ್ಕಾರದ ವಿರುದ್ಧ BJP ಆಕ್ರೋಶ..!

ಇದು ಕೇವಲ ಆಡಳಿತಾತ್ಮಕ ಅನುಕೂಲಕ್ಕೆ ಸಂಬಂಧಿಸಿದ ವಿಚಾರವಲ್ಲ. ರಾಷ್ಟ್ರೀಯ ಚಿಹ್ನೆಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸುವ ಪ್ರಶ್ನೆಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

1971ರ ಕಾಯ್ದೆಯ ಸೆಕ್ಷನ್ 3ರ ಅಡಿ ರಾಷ್ಟ್ರಗಾನಕ್ಕೆ ನೀಡಲಾಗಿರುವ ರಕ್ಷಣೆಯನ್ನು ‘ವಂದೇ ಮಾತರಂ’ಗೂ ವಿಸ್ತರಿಸಲಾಗಿದೆ ಎಂಬ ಅಂಶವನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸೂಚಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ಹಾಗೂ ಬರಗಾಲದ ಕುರಿತ ಚರ್ಚೆಗಾಗಿ ಕರೆಯಲಾಗಿರುವ ಮೂರು ದಿನಗಳ ವಿಧಾನಮಂಡಲ ಅಧಿವೇಶನದ ಮೊದಲ ದಿನವಾದ ಸೋಮವಾರ ವಿಧಾನ ಪರಿಷತ್ತಿನಲ್ಲಿ ‘ವಂದೇ ಮಾತರಂ’ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಲಾಗಿತ್ತು. ಇದನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ರಾಜ್ಯಪಾಲರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com