ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಸಿಎಂ ಡಿ.ಕೆ.ಶಿವಕುಮಾರ್

ರೈತರು ಹಾಗೂ ಸ್ಥಳೀಯ ಜನರನ್ನು ಸ್ಥಳಾಂತರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ವೈಜ್ಞಾನಿಕ ಆಧಾರವಿಲ್ಲದ ನಿರ್ಬಂಧಗಳನ್ನು ಹೇರಿದರೆ ಕೃಷಿ ಹಾಗೂ ಇತರ ಜೀವನೋಪಾಯ ಚಟುವಟಿಕೆಗಳನ್ನು ಅವಲಂಬಿಸಿರುವ ಜನರಲ್ಲಿ ಗಂಭೀರ ಆತಂಕ ಉಂಟಾಗಬಹುದು.
DK Shivkumar
ಸಿಎಂ ಡಿ.ಕೆ.ಶಿವಕುಮಾರ್
Updated on

ಬೆಂಗಳೂರು: ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಡಾ. ಕೆ. ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸುವ ಕೇಂದ್ರ ಸರ್ಕಾರದ ಕ್ರಮವು 10 ಜಿಲ್ಲೆಗಳ ಜನರ ಜೀವನೋಪಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಕಸ್ತೂರಿರಂಗನ್ ವರದಿ ಹಾಗೂ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಆರಂಭವಾದ ಮೂರು ದಿನಗಳ ವಿಶೇಷ ಅಧಿವೇಶನದ ಮೊದಲ ದಿನ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರೈತರು ಮತ್ತು ಜನರ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಪರಿಸರವನ್ನು ಉಳಿಸುವುದರ ಜೊತೆಗೆ ಜನರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಳ್ಳುವುದು ಸರ್ಕಾರದ ಜವಾಬ್ದಾರಿ. ಎರಡರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು. ಕರಡು ಅಧಿಸೂಚನೆ ಇನ್ನೂ ಅಂತಿಮವಾಗಿಲ್ಲ. ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಹಾಗೂ ಸಲಹೆಗಳನ್ನು ಸಲ್ಲಿಸಲು ಸಮಯವಿದೆ ಎಂದು ತಿಳಿಸಿದರು.

ಇದೇ ವೇಳೆ ರೈತರು ಹಾಗೂ ಸ್ಥಳೀಯ ಜನರನ್ನು ಸ್ಥಳಾಂತರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ವೈಜ್ಞಾನಿಕ ಆಧಾರವಿಲ್ಲದ ನಿರ್ಬಂಧಗಳನ್ನು ಹೇರಿದರೆ ಕೃಷಿ ಹಾಗೂ ಇತರ ಜೀವನೋಪಾಯ ಚಟುವಟಿಕೆಗಳನ್ನು ಅವಲಂಬಿಸಿರುವ ಜನರಲ್ಲಿ ಗಂಭೀರ ಆತಂಕ ಉಂಟಾಗಬಹುದು ಎಂದು ಹೇಳಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರೈತರು, ಶಾಸಕರು, ಸಂಸದರು ಹಾಗೂ ರೈತ ಪ್ರತಿನಿಧಿಗಳೊಂದಿಗೆ ತಾವು ಚರ್ಚೆ ನಡೆಸಿದ್ದಾಗಿ ತಿಳಿಸಿದರು.

ರೈತರ ಜೀವನೋಪಾಯದ ಹಕ್ಕು, ಅವರ ಆಕ್ರೋಶ ಹಾಗೂ ಸ್ವಾಭಿಮಾನವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಎಲ್ಲ ಸಂಸದರು ಮತ್ತು ಶಾಸಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಸಾವಿರಾರು ಜನರು ಮನವಿಗಳನ್ನು ಸಲ್ಲಿಸಿದ್ದಾರೆ” ಎಂದು ಹೇಳಿದರು.

DK Shivkumar
ಕಸ್ತೂರಿರಂಗನ್ ವರದಿ ಗದ್ದಲ: ಮೇಲ್ಮನೆಯಲ್ಲಿ ಸತತ 10 ಗಂಟೆಗಳ ಮಹಾ ಚರ್ಚೆ; ಸರ್ಕಾರದ ನಿಲುವೇನು..?

371ನೇ ವಿಧಿಯಡಿ ವಿಶೇಷ ಸ್ಥಾನಮಾನಕ್ಕೆ ಸಲಹೆ

ಸಮಾಲೋಚನೆ ವೇಳೆ ರೈತರು ಕಸ್ತೂರಿರಂಗನ್ ವರದಿಯನ್ನು ತಿರಸ್ಕರಿಸಿ, ಈ ವಿಚಾರವನ್ನು ಅಧ್ಯಯನ ಮಾಡಲು ಹೊಸ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕರ್ನಾಟಕವು ಕೇರಳ ಮಾದರಿಯನ್ನು ಅನುಸರಿಸಿ ಪರಿಸರ ಸೂಕ್ಷ್ಮ ವಲಯದ ಪರಿಕಲ್ಪನೆಯನ್ನೇ ಕೈಬಿಡಬೇಕು ಎಂಬ ಸಲಹೆಯೂ ಬಂದಿದೆ ಎಂದು ಹೇಳಿದರು.

ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಾಂತ್ರಿಕ ಸಮಿತಿ ರಚಿಸುವಂತೆ ಸಲಹೆ ನೀಡಿದ್ದರೆ, ಬಿಜೆಪಿ ಶಾಸಕ ಹಾಗೂ ಮಾಜಿ ಗೃಹ ಸಚಿವ ಅರಾಗ ಜ್ಞಾನೇಂದ್ರ ಅವರು ಅರಣ್ಯಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಅಧಿಕಾರಕ್ಕಾಗಿ ಹೋರಾಡಬೇಕು ಎಂದು ಪ್ರಸ್ತಾಪಿಸಿದ್ದಾರೆ ಎಂದು ತಿಳಿಸಿದರು.

ಪರಿಸರದ ವಿರುದ್ಧವಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮ ಆಸ್ತಿ ಹಾಗೂ ಜೀವನೋಪಾಯಕ್ಕೆ ಯಾವುದೇ ತೊಂದರೆಯಾಗಬಾರದು ಎಂಬುದು ಅವರ ಬೇಡಿಕೆ ಎಂದು ಹೇಳಿದರು.

ಎಲ್ಲ ಪಕ್ಷಗಳ ನಿಯೋಗವನ್ನು ಕೇಂದ್ರದ ಬಳಿಗೆ ಕೊಂಡೊಯ್ಯಬೇಕು ಹಾಗೂ ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಅಂಗೀಕರಿಸಬೇಕು ಎಂಬ ಸಲಹೆಗಳೂ ಬಂದಿವೆ. ಸಂವಿಧಾನದ 371ನೇ ವಿಧಿಯಡಿ ವಿಶೇಷ ಸ್ಥಾನಮಾನ ಪಡೆಯುವ ಕುರಿತು ಪರಿಶೀಲಿಸಬೇಕು ಎಂಬ ಅಭಿಪ್ರಾಯವೂ

ಇದು ನನ್ನ ವೈಯಕ್ತಿಕ ನಿರ್ಧಾರವಾಗಬಾರದು. ಬರ, ರೈತರ ಸಮಸ್ಯೆಗಳು ಮತ್ತು ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಿ, ರೈತರು, ಸಾಮಾನ್ಯ ಜನರು ಹಾಗೂ ಬಾಧಿತ ಪ್ರದೇಶಗಳ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆಯಲು ನಾವು ಈ ವಿಶೇಷ ಅಧಿವೇಶನ ಕರೆದಿದ್ದೇವೆ ಎಂದು ಹೇಳಿದರು.

ಈ ವಿಚಾರದಲ್ಲಿ ಎಲ್ಲ ಪಕ್ಷಗಳಿಗೂ ಚರ್ಚೆ ನಡೆಸಿ ಪರಿಹಾರಗಳನ್ನು ಸೂಚಿಸಲು ಸರ್ಕಾರ ಅವಕಾಶ ನೀಡಿದೆ. ರಾಜಕೀಯವನ್ನು ಬದಿಗಿಟ್ಟು ಕರ್ನಾಟಕದ ಹಿತಾಸಕ್ತಿಗಾಗಿ ಕೆಲಸ ಮಾಡೋಣ. ಪ್ರತಿಪಕ್ಷದಿಂದ ಅಮೂಲ್ಯ ಸಲಹೆಗಳನ್ನು ಪಡೆಯುವ ಉದ್ದೇಶದಿಂದಲೇ ಈ ವಿಶೇಷ ಅಧಿವೇಶನವನ್ನು ಕರೆದಿದ್ದೇವೆ ಎಂದು ಹೇಳಿದರು.

ಇತ್ತೀಚೆಗೆ ನಡೆದ 10 ದಿನಗಳ ಮುಂಗಾರು ಅಧಿವೇಶನವನ್ನು ಪ್ರತಿಪಕ್ಷವು ಪದೇಪದೆ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ವ್ಯರ್ಥಗೊಳಿಸಿತು ಎಂದು ಶಿವಕುಮಾರ್ ಆರೋಪಿಸಿದರು.

ಕಸ್ತೂರಿರಂಗನ್ ವರದಿ ಆಧರಿಸಿ ಪರಿಸರ ಸೂಕ್ಷ್ಮ ಪ್ರದೇಶಗಳ ಕುರಿತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2026ರ ಜುಲೈ 27ರಂದು ಹೊರಡಿಸಿರುವ 7ನೇ ಕರಡು ಅಧಿಸೂಚನೆ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ. ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಸೆಪ್ಟೆಂಬರ್ 27ರೊಳಗೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com