ಬರ ಪೀಡಿತ ಪಟ್ಟಿಯಿಂದ ಇಂಡಿ ಕೈಬಿಟ್ಟಿದ್ದಕ್ಕೆ ಬೇಸರ: ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ಬರಗಾಲ ಪೀಡಿತ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ, ಚಡಚಣ ತಾಲೂಕು ಕೈಬಿಟ್ಟ ಹಿನ್ನೆಲೆಯಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Yashwant Raya Gowda
ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್
Updated on

ಬೆಂಗಳೂರು: ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಸೇರಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ಡಿಕೆ ಶಿವಕುಮಾರ್​​ ಅವರಿಗೂ ಯಶವಂತರಾಯಗೌಡ ಪಾಟೀಲ್ ಮಾಹಿತಿ ನೀಡಿದ್ದು, ಸದ್ಯ ಸಿಎಂ ಕಚೇರಿಯಲ್ಲಿ ಶಾಸಕರ ಮನವೊಲಿಕೆ ಯತ್ನ ನಡೆಯುತ್ತಿದೆ.

ಬರಗಾಲ ಪೀಡಿತ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ, ಚಡಚಣ ತಾಲೂಕು ಕೈಬಿಟ್ಟ ಹಿನ್ನೆಲೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಲವು ಬಾರಿ ಮನವಿ ಮಾಡಿದರೂ ಇಂಡಿ ಹಾಗೂ ಚಡಚಣ ತಾಲೂಕು ಬರ ಘೋಷಣೆ ಆಗಿಲ್ಲ. ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಬೇಸರಗೊಂಡು ಸ್ಪೀಕರ್ ಅವರನ್ನ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಈಗಿನ ರಾಜಕೀಯ ವಾತಾವಣರದಲ್ಲಿ ಬಲಾಢ್ಯರಿಗೆ, ಒತ್ತಡ ತಂತ್ರಗಳನ್ನು ಹೆಣೆಯುವವರಿಗೆ ಮನ್ನಣೆ ಇದೆ. ನಮ್ಮಂತಹ ಸೌಮ್ಯ ಸ್ವಭಾವದವರಿಗೆ ಯಾವುದೇ ಕೆಲಸಗಳಿಗೆ ಮನ್ನಣೆ ದೊರೆಯುತ್ತಿಲ್ಲ. ಕಾರಣ ನನ್ನ ಕ್ಷೇತ್ರದ ಜನರ ಅಶೆ, ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Yashwant Raya Gowda
Watch | ಗದಗ ತಾಲೂಕು ಬರ ಪೀಡಿತ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ ಪಾಟೀಲ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com