ಕೊಲೆ ಆರೋಪಿ ನಟ ದರ್ಶನ್​​ಗೆ ಮತ್ತೊಂದು ಶಾಕ್; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ರಾವ್ ಮಾಫಿ ಸಾಕ್ಷಿ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್‌ ತೂಗುದೀಪ ಪರವಾಗಿ ಪತ್ನಿ ವಿಜಯಲಕ್ಷ್ಮಿ ಅವರು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
Renukaswamy murder case: High Court dismisses Actor Darshan's petition against order allowing Pradosh to turn approver
ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ
Updated on

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಹೈಕೋರ್ಟ್​ನಲ್ಲಿ ಮತ್ತೆ ತೀವ್ರ ಹಿನ್ನಡೆ ಆಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ರಾವ್ ಮಾಫಿ ಸಾಕ್ಷಿ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್‌ ತೂಗುದೀಪ ಪರವಾಗಿ ಪತ್ನಿ ವಿಜಯಲಕ್ಷ್ಮಿ ಅವರು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಲು 59ನೇ ಸಿಸಿಹೆಚ್ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

Renukaswamy murder case: High Court dismisses Actor Darshan's petition against order allowing Pradosh to turn approver
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಪರ ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ವಿಜಯಲಕ್ಷ್ಮಿ!

ಕ್ರಾಸ್ ಎಗ್ಸಾಮಿನೇಷನ್ ವೇಳೆ ಪ್ರದೋಷ್ ಅವರನ್ನು ಪ್ರಶ್ನಿಸುವ ಹಕ್ಕಿದೆ. ಹೀಗಾಗಿ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಮೂರ್ತಿ ವಿ ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಹೇಳಿದೆ.

ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ವಿಚಾರಣಾ ನ್ಯಾಯಾಲಯವು ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಪಡಿಸಬೇಕೆಂದು ದರ್ಶನ್ ಪರವಾಗಿ ಪತ್ನಿ ವಿಜಯಲಕ್ಷ್ಮಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ನಟ ದರ್ಶನ್ ವಿರೋಧಿಗಳ ಪ್ರಭಾವ ಮತ್ತು ಚಿತಾವಣೆಗೆ ಒಳಗಾಗಿ, ಪ್ರದೋಷ್‌ ತಮ್ಮ ಸ್ವಾರ್ಥಕ್ಕಾಗಿ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದಾರೆ. ಕಳೆದ 2 ವರ್ಷಗಳಿಂದ ಯಾವುದೇ ಅರ್ಜಿ ಸಲ್ಲಿಸದೆ, ಈಗ ದಿಢೀರನೆ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದು ಅನುಮಾನಾಸ್ಪದವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com