'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ನಿತ್ಯ 4,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ; CM ಡಿಕೆಶಿ ಹೇಳಿದ್ದೇನು?

ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
In a major setback for Karnataka, CWRC recommends to release of 4000 cusecs cauvery water daily to Tamil Nadu
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದ್ದು, ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಗುರುವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಆದೇಶದಿಂದಾಗಿ ಕರ್ನಾಟಕವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕಾಗಿದೆ. ಈಗಾಗಲೇ ನೀರಿನ ಬರದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಿದೆ.

ಸಭೆಯಲ್ಲಿ ಕರ್ನಾಟಕದಿಂದ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು.

In a major setback for Karnataka, CWRC recommends to release of 4000 cusecs cauvery water daily to Tamil Nadu
ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?

ಇನ್ನು ಸಿಡಬ್ಲ್ಯೂಆರ್​​ಸಿ ತಮಿಳುನಾಡಿಗೆ ನಿತ್ಯ 4,000 ಕ್ಯೂಸೆಕ್ ನೀರು ಹರಿಸಲು ಶಿಫಾರಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು​​, ಕಾವೇರಿ ಜಲಾಶಯಗಳಲ್ಲಿ ಒಳಹರಿವು ಕಡಿಮೆಯಾಗಿದೆ. ಹೀಗಾಗಿ ಸಿಡಬ್ಲ್ಯುಆರ್‌ಸಿ ಶಿಫಾರಸು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು. ನಮ್ಮ ಮೇಲೆ ಒತ್ತಡ ಇದೆ, ಆದರೆ ಮಳೆ ಬರುತ್ತಿಲ್ಲ. ಸಂಜೆ ಈ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com