ಕೋಲಾರ: ಚೆನ್ನೈ - ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ!

ಅತಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು, ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Three killed in an accident near Kolar
ಅಪಘಾತದಲ್ಲಿ ನಜ್ಜುಗುಜ್ಜಾದ ಕಾರು
Updated on

ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮರಗಲ್ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೆದ್ದಾರಿಯ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅತಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು, ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ, ಆದರೆ ಮೃತರು ಹಾಗೂ ಗಾಯಾಳುಗಳು ಪುಣೆ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬಂಗಾರಪೇಟೆ ಮತ್ತು ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

Three killed in an accident near Kolar
ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ; ತಿಮ್ಮಪ್ಪನ ದರ್ಶನ ಪಡೆದು ವಾಪಸಾಗುತ್ತಿದ್ದ ನಾಲ್ವರ ದುರ್ಮರಣ

ಈ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com