ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಬೆಂಗಳೂರು ನಗರ ಪೊಲೀಸರ ಮಾರ್ಗಸೂಚಿ

ಟ್ರಾಫಿಕ್ ಸಿಗ್ನಲ್‌ಗಳು, ಸೂಕ್ಷ್ಮ ಪ್ರದೇಶಗಳು ಹಾಗೂ ಕಾರ್ಯಕ್ರಮಗಳು ಅಥವಾ ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
Collected photos
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತೃತೀಯಲಿಂಗಿಗಳಿಂದ ಕಿರುಕುಳ, ಆಕ್ರಮಣಕಾರಿ ರೀತಿಯಲ್ಲಿ ಹಣ ಕೇಳುವುದು, ಸಂಚಾರಕ್ಕೆ ಅಡ್ಡಿಪಡಿಸುವುದು ಹಾಗೂ ಇತರ ಅಕ್ರಮ ಚಟುವಟಿಕೆಗಳ ಕುರಿತು ಬಂದಿರುವ ದೂರುಗಳ ಹಿನ್ನೆಲೆಯಲ್ಲಿ, ಇಂತಹ ಚಟುವಟಿಕೆಗಳನ್ನು ನಿಯಂತ್ರಿಸಲು ಬೆಂಗಳೂರು ನಗರ ಪೊಲೀಸರು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ಆಕ್ರಮಣಕಾರಿ ರೀತಿಯಲ್ಲಿ ಹಣ ಅಥವಾ ಭಿಕ್ಷೆ ಕೇಳುವುದು, ಪ್ರಯಾಣಿಕರ ವಾಹನ ಸಂಚಾರಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು, ನಿಂದನಾತ್ಮಕ ವರ್ತನೆ, ಹಲ್ಲೆ ಹಾಗೂ ಕಿರುಕುಳದ ಕುರಿತು ಬಂದಿರುವ ದೂರುಗಳನ್ನು ಪರಿಶೀಲಿಸಿ, ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಾರ್ಗಸೂಚಿಯಲ್ಲಿ ಪೊಲೀಸರಿಗೆ ಸೂಚಿಸಲಾಗಿದೆ.

ಟ್ರಾಫಿಕ್ ಸಿಗ್ನಲ್‌ಗಳು, ಸೂಕ್ಷ್ಮ ಪ್ರದೇಶಗಳು ಹಾಗೂ ಕಾರ್ಯಕ್ರಮಗಳು ಅಥವಾ ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

Collected photos
ತೃತೀಯ ಲಿಂಗಿಗಳು ಮತದಾನ ಮಾಡದಿದ್ದರೆ, ಹಕ್ಕುಗಳನ್ನು ಕೇಳಲು ಅವರಿಗೆ ಯಾವುದೇ ಅಧಿಕಾರವಿಲ್ಲ: ಜೋಗತಿ ಮಂಜಮ್ಮ

ಪುನರಾವರ್ತಿತವಾಗಿ ದೂರುಗಳು ಬರುತ್ತಿರುವ ಸ್ಥಳಗಳನ್ನು ಪ್ರತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗುರುತಿಸಿ, ಅಂತಹ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸುವಂತೆ ಸೂಚಿಸಲಾಗಿದೆ. ತೃತೀಯಲಿಂಗಿ ಸಮುದಾಯದವರೊಂದಿಗೆ ಸಭೆ ನಡೆಸಿ, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ಜಾಗೃತಿ ಮೂಡಿಸುವಂತೆಯೂ ಪೊಲೀಸರಿಗೆ ಸೂಚಿಸಲಾಗಿದೆ.

ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವುದು ಹಾಗೂ ಸುಗಮ ಸಂಚಾರವನ್ನು ಖಚಿತಪಡಿಸುವುದರ ಜತೆಗೆ, ತೃತೀಯಲಿಂಗಿಗಳ ಕಾನೂನುಬದ್ಧ ಹಕ್ಕುಗಳು, ಘನತೆ ಮತ್ತು ಗೌರವವನ್ನು ಪೊಲೀಸರು ರಕ್ಷಿಸಬೇಕು ಎಂದು ಮಾರ್ಗಸೂಚಿಯಲ್ಲಿ ಒತ್ತಿಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com