ಹಾವೇರಿ: ಆಸ್ತಿ ವಿಚಾರಕ್ಕೆ ತಾಯಿ-ಮಗನನ್ನು ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು

ಆಸ್ತಿ ವಿಚಾರವಾಗಿ ತಾಯಿ ಮತ್ತು ಮಗನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಹಾವೇರಿ: ಆಸ್ತಿ ವಿಚಾರವಾಗಿ ತಾಯಿ ಮತ್ತು ಮಗನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು 55 ವರ್ಷದ ಪ್ರೇಮಕ್ಕ ಬಡಿಗೇರ ಹಾಗೂ ಪುತ್ರ 38 ವರ್ಷದ ಅವಿನಾಶ್ ಬಡಿಗೇರ ಎಂದು ಗುರುತಿಸಲಾಗಿದೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೇಮಕ್ಕ ಬಡಿಗೇರ ಕೆಲವು ವರ್ಷಗಳ ಹಿಂದೆ ಆಸ್ತಿಯನ್ನು ಖರೀದಿ ಮಾಡಿದ್ದರು. ಆದರೆ ಆಸ್ತಿಯನ್ನು ಪ್ರೇಮಕ್ಕ ಹೆಸರಿಗೆ ವರ್ಗಾವಣೆ ಮಾಡಿರಲಿಲ್ಲ. ಈ ಸಂಬಂಧ ಕಾನೂನು ಹೋರಾಟ ನಡೆಸಿ ಕೋರ್ಟ್ ಮೂಲಕ ಆಸ್ತಿಯನ್ನು ಮರಳಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಇದರಿಂದ ರೊಚ್ಚಿಗೆದ್ದ ತಿರಕಯ್ಯ ಹೊಸಮಠ ಹಾಗೂ ಬಸವರಾಜ ಹೊಸಮಠ ಎಂಬುವವರು ಕೊಲೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಆಡೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸಂಗ್ರಹ ಚಿತ್ರ
ಚಿಕ್ಕಮಗಳೂರು: ತೆಂಗಿನ ಮರ ಕಡಿದಿದ್ದಕ್ಕೆ ಅದೇ ಮಚ್ಚಲ್ಲಿ ಅಳಿಯನನ್ನೇ ಕೊಚ್ಚಿ ಕೊಂದ ಮಾವ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com