ಸಚಿವ ರಿಜ್ವಾನ್ ಅರ್ಷದ್ ದೆಹಲಿ ಭೇಟಿ ಸಕ್ಸಸ್: ಕೇಂದ್ರದಿಂದ ಕರ್ನಾಟಕಕ್ಕೆ 406 ಕೋಟಿ ರೂ. ಅನುದಾನ ಬಿಡುಗಡೆ..!

ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ರಿಜ್ವಾನ್ ಅವರ ಮೊದಲ ದೆಹಲಿ ಭೇಟಿ ಇದಾಗಿದ್ದು, ಸಭೆಯ ಬಳಿಕ ರಾಜ್ಯ ಸರ್ಕಾರಕ್ಕೆ ಬಾಕಿ ಇದ್ದ ರೂ.406 ಕೋಟಿ ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಿದೆ.
Rizwan Arshad meets Pralhad Joshi
ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾದ ರಿಜ್ವಾನ್ ಅರ್ಷದ್
Updated on: 

ನವದೆಹಲಿ: ಕರ್ನಾಟಕ ಸರ್ಕಾರಕ್ಕೆ ಕೇಂದ್ರದಿಂದ ಬರಬೇಕಾಗಿದ್ದ ಬಾಕಿ ಹಣದಲ್ಲಿ ₹406 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ನವದೆಹಲಿಯಲ್ಲಿ ಸಚಿವ ರಿಜ್ವಾನ್ ಅರ್ಷದ್ ಹಾಗೂ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಅವರ ನಡುವೆ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ.

ಗುರುವಾರ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಅವರು ದೆಹಲಿಯಲ್ಲಿ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಹಾಗೂ ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾದರು.

ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ರಿಜ್ವಾನ್ ಅವರ ಮೊದಲ ದೆಹಲಿ ಭೇಟಿ ಇದಾಗಿದ್ದು, ಸಭೆಯ ಬಳಿಕ ರಾಜ್ಯ ಸರ್ಕಾರಕ್ಕೆ ಬಾಕಿ ಇದ್ದ ರೂ.406 ಕೋಟಿ ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮೊತ್ತಕ್ಕೆ ನಾನು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ವಿವಿಧ ವಿಭಾಗಗಳ ಅಡಿಯಲ್ಲಿ ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಇನ್ನೂ ಸುಮಾರು ರೂ.2,200 ಕೋಟಿ ಬಾಕಿ ಬರಬೇಕಿದೆ. ಮುಂದಿನ ದಿನಗಳಲ್ಲಿ ಆ ಮೊತ್ತವನ್ನೂ ಬಿಡುಗಡೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ರಿಜ್ವಾನ್ ಅರ್ಷದ್ ಅವರು ತಿಳಿಸಿದ್ದಾರೆ.

Rizwan Arshad meets Pralhad Joshi
ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ; ಹೂಡಿಕೆದಾರರಿಗೆ ರೆಡ್ ಕಾರ್ಪೆಟ್

ಕೇಂದ್ರದಿಂದ ಬಿಡುಗಡೆಯಾದ ರಪೂ.406 ಕೋಟಿ, ಕರ್ನಾಟಕಕ್ಕೆ ಬಾಕಿ ಇದೆ ಎಂದು ಹೇಳಲಾಗುತ್ತಿರುವ ಒಟ್ಟು ಮೊತ್ತದ ಸುಮಾರು ಐದನೇ ಒಂದು ಭಾಗವಾಗಿದೆ. ಇದರಿಂದ ಇನ್ನೂ ಸುಮಾರು ರೂ.1,800 ಕೋಟಿ ಬಾಕಿ ಉಳಿದಿದೆ.

ಆರಂಭಿಕ ಹಂತದಲ್ಲೇ ರಿಜ್ವಾನ್ ಅರ್ಷದ್ ಅವರು ಕೇಂದ್ರದಿಂದ ಬಾಕಿ ಅನುದಾನ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿರುವುದು ಕೇಂದ್ರ-ರಾಜ್ಯ ಸಂಬಂಧಗಳಲ್ಲಿ ಅನುದಾನ ಹಂಚಿಕೆ ವಿಚಾರದಲ್ಲಿ ನಿಜವಾದ ಸೌಹಾರ್ದತೆಯ ಆರಂಭವೇ ಅಥವಾ ಒಮ್ಮೆ ಮಾತ್ರದ ಕ್ರಮವೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

ಸಭೆಯಲ್ಲಿ ಕರ್ನಾಟಕದ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಸುಧಾರಣೆಗಳ ಬಗ್ಗೆಯೂ ಕೇಂದ್ರ ಸಚಿವರಿಗೆ ಮಾಹಿತಿ ನೀಡಲಾಯಿತು.

ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಲಾಯಿತು. ಧಾನ್ಯ ಸಂಗ್ರಹಣಾ ಗೋದಾಮುಗಳಲ್ಲಿ ಸಿಸಿಟಿವಿ ಕಣ್ಗಾವಲು ಹಾಗೂ ಸಾಗಣೆ ವಾಹನಗಳ ಜಿಪಿಎಸ್‌ ಟ್ರ್ಯಾಕಿಂಗ್ ಸೇರಿದಂತೆ ಹಲವು ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ತಿಳಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com