ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ' ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
CM D K Shivakumar
ಸಿಎಂ ಡಿ ಕೆ ಶಿವಕುಮಾರ್ online desk
Updated on: 

ಬೆಂಗಳೂರು: “ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ಫ್ರೀಡಂ ಪಾರ್ಕ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಹಾಲಿನ ದರ ಏರಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ನನ್ನನ್ನು ಭೇಟಿಯಾಗಿ 12ರೂ. ಹೆಚ್ಚಳ ಮಾಡಿ. ಅದರಲ್ಲಿ 2 ರೂ. ಸಂಘಗಳಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿಗಳನ್ನು ಪಡೆದು, ಪರಿಶೀಲಿಸಿದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ' ಎಂದು ಹೇಳಿದರು.

CM D K Shivakumar
ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 5 ರೂಪಾಯಿ ಹೆಚ್ಚಳಕ್ಕೆ ಸರ್ಕಾರ ಸಮ್ಮತಿ: ಅಧಿಕೃತ ಆದೇಶವೊಂದೇ ಬಾಕಿ!

'ಹಾಲಿನ ಪ್ರಸ್ತುತ ದರದಿಂದ ಸಂಘಗಳಿಗೆ ನಷ್ಟವಾಗುತ್ತಿದೆ. ಬೆಲೆ ವಿಚಾರದಲ್ಲಿ ರೈತರಲ್ಲಿ ಆಕ್ರೋಶವಿದೆ. 50 ಸಾವಿರ ಹಾಲು ಉತ್ಪಾದಕರು ಹಾಲಿನ ದರ ಏರಿಕೆಗೆ ಆಗ್ರಹಿಸಿದ್ದಾರೆ. ರೈತರನ್ನು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ' ಎಂದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com