

ಹಾಸನ: ಹಾಸನದ ಚನ್ನರಾಯಪಟ್ಟಣದ ಹಿರಿಸಾವೆಯಲ್ಲಿ ಪತ್ನಿ ವಿರುದ್ಧ ಅನೈತಿಕ ಸಂಬಂಧದ ಆರೋಪ ವ್ಯಕ್ತಿಯೋರ್ವ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನನ್ನು ಬೆಳಗಿಹಳ್ಳಿ ಗ್ರಾಮದ 27 ವರ್ಷದ ದೊರೆ ಎಂದು ಗುರುತಿಸಲಾಗಿದೆ. ದೊರೆ ನೊಣವಿನಕೆರೆ ಗ್ರಾಮದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದನು.
ಆದರೆ ಕಳೆದ 15 ದಿನಗಳ ಹಿಂದೆ ಪತ್ನಿ ಮನೆ ಬಿಟ್ಟು ತವರು ಮನೆ ಸೇರಿದ್ದಳು. ಇದರಿಂದ ಬೇಸರಗೊಂಡಿದ್ದ ದೊರೆ ತನ್ನ ಪತ್ನಿಗೆ ಪರಪುರುಷನ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿ ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ದೊರೆ ವಿಡಿಯೋದಲ್ಲಿ ನನ್ನ ಪತ್ನಿಗೆ ಅಕ್ರಮ ಸಂಬಂಧ ಇರುವ ವಿಚಾರ ತಿಳಿದರೂ ಆಕೆಯ ಪೋಷಕರು ಬುದ್ಧಿವಾದ ಹೇಳಲಿಲ್ಲ. ಪ್ರೀತಿಸಿ ಮದುವೆಯಾಗಿದ್ದರಿಂದ ನಾನು ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದೆ. ಆದರೆ ಆಕೆ ನನಗೆ ದ್ರೋಹ ಬಗೆದಿದ್ದಾಳೆ. ನನ್ನ ಮೇಲೆ ಮಾಟ-ಮಂತ್ರ ಮಾಡಿಸಿದ್ದಾಳೆ ಎಂದು ಆರೋಪಿಸಿದ್ದಾನೆ. ವಿಡಿಯೋ ಸಾಕ್ಷ್ಯದ ಆಧಾರವಾಗಿಟ್ಟುಕೊಂಡು ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೊರೆ ವಿಡಿಯೋದಲ್ಲಿ ಹೇಳಿದ್ದಾನೆ.
ನನಗೆ ನ್ಯಾಯ ಒದಗಿಸಿ ಎಂದು ಕರ್ನಾಟಕ ಪೊಲೀಸರಿಗೆ ಮನವಿ ಮಾಡುತ್ತಿದ್ದೇನೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಆಕೆಯ ಫೋನ್ ರೆಕಾರ್ಡಿಂಗ್ ಪರಿಶೀಲಿಸಿ ಅವಳನ್ನ ಮಾತ್ರ ಸುಮ್ಮನೆ ಬಿಡಿಬೇಡಿ ಎಂದು ಕಣ್ಣೀರಿಟ್ಟಿದ್ದಾನೆ.