ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಹೊಸ ಪಟ್ಟಿ ಸಿದ್ಧಪಡಿಸಿ: ಹೈಕೋರ್ಟ್

ಮರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ 2023ರ ಫೆಬ್ರವರಿ 1ರಂದು ಹೊರಡಿಸಲಾದ ಸುತ್ತೋಲೆಯನ್ನು ಪರಿಗಣಿಸಬಾರದು. ಆದರೆ ನರೇಂದ್ರ ಬಾಬು ಜಿವಿ ಮತ್ತಿತರರು V/s ಸರ್ಕಾರ ಮತ್ತಿತರರು ಪ್ರಕರಣದಲ್ಲಿ ವಿಭಾಗೀಯ ಪೀಠವೊಂದು ರಿಟ್ ಮೇಲ್ಮನವಿಗಳಲ್ಲಿ ನೀಡಿರುವ ನಿರ್ದೇಶನಗಳನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.
High court
ಹೈಕೋರ್ಟ್
Updated on: 

ಬೆಂಗಳೂರು: ಹೈದರಾಬಾದ್-ಕರ್ನಾಟಕ (HK) ಪ್ರದೇಶದಲ್ಲಿ 6ರಿಂದ 8ನೇ ತರಗತಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗಾಗಿ ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರ ಹಾಗೂ ಉಪನಿರ್ದೇಶಕರಿಗೆ (Administration) ಹೊಸ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ 2023ರ ಫೆಬ್ರವರಿ 1ರಂದು ಹೊರಡಿಸಲಾದ ಸುತ್ತೋಲೆಯನ್ನು ಪರಿಗಣಿಸಬಾರದು. ಆದರೆ ನರೇಂದ್ರ ಬಾಬು ಜಿವಿ ಮತ್ತಿತರರು V/s ರಾಜ್ಯ ಸರ್ಕಾರ ಮತ್ತಿತರರು ಪ್ರಕರಣದಲ್ಲಿ ವಿಭಾಗೀಯ ಪೀಠವೊಂದು ರಿಟ್ ಮೇಲ್ಮನವಿಗಳಲ್ಲಿ ನೀಡಿರುವ ನಿರ್ದೇಶನಗಳನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂರು ತಿಂಗಳೊಳಗೆ ನೇಮಕಾತಿ ಆದೇಶಗಳನ್ನು ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯ ಕಲಬುರಗಿ ಪೀಠವು 2024ರ ಜನವರಿ 31ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ನಾಗಪ್ಪ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಹಾಗೂ ನ್ಯಾಯಮೂರ್ತಿ ಬ್ರುಂಜೇಶ್ ಎಂ. ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವಾ ನಿಯಮಗಳು-1) 2023ರ ಫೆಬ್ರವರಿ 1ರಂದು ಹೊರಡಿಸಿದ್ದ ಸುತ್ತೋಲೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ. ಹೈದರಾಬಾದ್ ಕರ್ನಾಟಕ ಪ್ರದೇಶದ ಬಹುತೇಕ ಅಭ್ಯರ್ಥಿಗಳು ಸ್ಥಳೀಯ ವೃಂದದ ಹುದ್ದೆಗಳಿಗೆ ಆಯ್ಕೆ ಬಯಸಿದ್ದರಿಂದ, ರಿಟ್ ಅರ್ಜಿದಾರರು ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದರು.

ಆದರೆ, ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವಾಗ ಹೊರಡಿಸಲಾದ ಸುತ್ತೋಲೆಯ ಪರಿಣಾಮವಾಗಿ, ಈ ಹಿಂದೆ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದ ರಿಟ್ ಅರ್ಜಿದಾರರನ್ನು ಇದೀಗ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಅವರ ಬದಲಿಗೆ ಹೈದರಾಬಾದ್ ಕರ್ನಾಟಕ ಪ್ರದೇಶದ ಕೆಲವು ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಇದು ಸಂವಿಧಾನದ 14 ಮತ್ತು 16ನೇ ವಿಧಿಗಳಲ್ಲಿ ಪ್ರತಿಪಾದಿಸಿರುವ ತತ್ವಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಸುತ್ತೋಲೆ ಹೊರಡಿಸಿ, ಹೈದರಾಬಾದ್ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳು ಮೊದಲು ಸ್ಥಳೀಯ ವೃಂದದ ಹುದ್ದೆಗಳಿಗೆ ಆಯ್ಕೆಗೆ ಸ್ಪರ್ಧಿಸಲು ಹಾಗೂ ಬಳಿಕ ಸ್ಥಳೀಯೇತರ ವೃಂದದ ಹುದ್ದೆಗಳಿಗೆ ಆಯ್ಕೆಯಾಗಲು ಅನುಕೂಲವಾಗುವಂತೆ ನಿಯಮಾವಳಿಯನ್ನು ಬದಲಿಸಿರುವುದು ಕೇವಲ ಅನಿಯಮಿತ ಕ್ರಮವಲ್ಲ, ಸಮಾನತೆಯ ತತ್ವಕ್ಕೂ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com