‘ಮಧು ಬಂಗಾರಪ್ಪ, MLCಗಳ ಬಣ್ಣ ಬಯಲು ಮಾಡುತ್ತೇನೆ, Video ಕ್ಲಿಪ್‌ಗಳಿವೆ, CMಗೆ ಕೊಡುತ್ತೇನೆ: ಹೆಚ್.ಎಸ್. ಸುಂದರೇಶ್ ಹೊಸ ಬಾಂಬ್

ಶೀಘ್ರದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳ ಬಗ್ಗೆ ಅವರಿಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.
Madhu Bangarappa
ಮಧು ಬಂಗಾರಪ್ಪ
Updated on: 

ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಸ್ ಬಾನು ಮತ್ತು ಮಂಜುನಾಥ್ ಭಂಡಾರಿ ಅವರು ಕಾಂಗ್ರೆಸ್ ನಾಯಕರ ಕುರಿತು ಮಾತನಾಡಿದ್ದಾರೆ ಎನ್ನಲಾದ ಹೇಳಿಕೆಗಳ ವಿಡಿಯೋ ತುಣುಕುಗಳು ನನ್ನ ಬಳಿ ಇದ್ದು, ಈ ವಿಡಿಯೋಗಳನ್ನು ಪಕ್ಷದ ಹಿರಿಯ ನಾಯಕರಿಗೆ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸುತ್ತೇನೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದ್ದಾರೆ ಅವರು ಹೇಳಿದ್ದಾರೆ.

ಶಿವಮೊಗ್ಗದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ತಾವು ನೀಡಿದ್ದ ಬಹುತೇಕ ಹೇಳಿಕೆಗಳಿಗೆ ಬದ್ಧವಾಗಿರುವುದಾಗಿ ಹೇಳಿದರು. ಆದರೆ, ಕೆಲವು ಹೇಳಿಕೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

ಶೀಘ್ರದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳ ಬಗ್ಗೆ ಅವರಿಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ವಿರುದ್ಧ ಅನುಚಿತ ಪದ ಬಳಕೆ ಮಾಡಿದ್ದಕ್ಕೆ ಸುಂದರೇಶ್ ಕ್ಷಮೆಯಾಚಿಸಿದರು.

Madhu Bangarappa
ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಪ್ತರಿಂದ ಹಣಕ್ಕೆ ಬೇಡಿಕೆ: ಕಾಂಗ್ರೆಸ್ ನಾಯಕ, SBUDA ಅಧ್ಯಕ್ಷ ಸುಂದರೇಶ್ ಆರೋಪ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರೆ ಅದಕ್ಕೂ ಕ್ಷಮೆಯಾಚಿಸುವುದಾಗಿ ಹೇಳಿದರು.

ಮಧು ಬಂಗಾರಪ್ಪ ಅವರನ್ನು ಏಕವಚನದಲ್ಲಿ ಉಲ್ಲೇಖಿಸಿದ್ದಕ್ಕೆ ವಿಷಾದವಿದೆ. ಆದರೆ ಸಚಿವರ ಕುರಿತು ತಾವು ಈ ಹಿಂದೆ ನೀಡಿದ್ದ ಇತರ ಹೇಳಿಕೆಗಳಿಗೆ ಬದ್ಧವಾಗಿರುವುದಾಗಿ ಅವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com