ಬೆಂಗಳೂರು: ಕೆಂಗೇರಿಯಲ್ಲಿ ಕಾಡಾನೆ ದಾಳಿಗೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಬಲಿ; ಮೃತನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ

ಸ್ಥಳೀಯ ನಿವಾಸಿಗಳು ಅವರನ್ನು ತಕ್ಷಣವೇ ಮೈಸೂರು ರಸ್ತೆಯಲ್ಲಿರುವ ಆರ್.ಆರ್. ವೈದ್ಯಕೀಯ ಕಾಲೇಜಿಗೆ ಕರೆದೊಯ್ದರಾದರೂ, ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
File image
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಕೆಂಗೇರಿ ಸಮೀಪದ ಆರ್.ಆರ್ ವೈದ್ಯಕೀಯ ಕಾಲೇಜು ಹಿಂಭಾಗದಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಂಚೆಪಾಳ್ಯ ಗ್ರಾಮದ ನಾಗರಾಜ್ ಮೃತ ದುರ್ದೈವಿ. ಇಂದು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ವಾಕಿಂಗ್‌ಗೆ ಹೋಗಿದ್ದ ವ್ಯಕ್ತಿ ಮೇಲೆ ಆನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಎರಡೂ ಕಾಂಪೌಂಡ್‌ಗಳೂ ಸಹ ಉರುಳಿಬಿದ್ದಿದ್ದು, ಸ್ಥಳೀಯರು ಕೂಡ ಆನೇ ದಾಳಿಯಿಂದಲೇ ಘಟನೆ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ನಿವಾಸಿಗಳು ಅವರನ್ನು ತಕ್ಷಣವೇ ಮೈಸೂರು ರಸ್ತೆಯಲ್ಲಿರುವ ಆರ್.ಆರ್. ವೈದ್ಯಕೀಯ ಕಾಲೇಜಿಗೆ ಕರೆದೊಯ್ದರಾದರೂ, ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿಯಲ್ಲಿ ಆನೆ ಓಡಾಟ ಮಾಡಿರೋದು ಬೆಳಕಿಗೆ ಬಂದಿದೆ. ಬೆಳಗ್ಗೆ 5 ಗಂಟೆ 11 ನಿಮಿಷಕ್ಕೆ ಆನೆ ವೇಗವಾಗಿ ಓಡುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಇನ್ನು ಅದೇ ರಸ್ತೆಯಲ್ಲಿ ಜಾಗಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಲವೇ ಸೆಕೆಂಡ್‌ಗಳಲ್ಲಿ ಆನೆದಾಳಿಯಿಂದ ಬಚಾವಾಗಿದ್ದಾರೆ.

File image
ಕೊಡಗು: ಅಮ್ಮಾ, ಎದ್ದೇಳಮ್ಮಾ... ತಾಯಿಯ ಶವದ ಪಕ್ಕ ಮರಿಯಾನೆಯ ಮೂಕ ರೋಧನೆ; ಕರುಳು ಹಿಂಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ; Video

ಈ ಘಟನೆಯು ಕಗ್ಗಲಿಪುರ ಅರಣ್ಯ ವಲಯದ ವ್ಯಾಪ್ತಿಯಲ್ಲಿ ನಡೆದಿದೆ ಮತ್ತು ಆನೆಯು ಬನ್ನೇರುಘಟ್ಟ ಪ್ರದೇಶದಿಂದ ಬಂದಿರಬಹುದು ಎಂದು ಶಂಕಿಸಲಾಗಿದೆ . ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಆನೆಯನ್ನು ಪತ್ತೆಹಚ್ಚಿ ಸೆರೆಹಿಡಿಯಲು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ನಾಗರಾಜ್ ಅವರು ತಮ್ಮ ಪತ್ನಿ ಮತ್ತು ನಾಲ್ವರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತಿದ್ದರು ಹಾಗೂ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಈ ಘಟನೆ ಅಂಚೆಪಾಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಕಳೆದ ಕೆಲ ದಿನಗಳಿಂದಲೂ ಕಾಡು ಪ್ರಾಣಿಗಳ ಸಂಚಾರದ ಬಗ್ಗೆ ಮಾಹಿತಿ ಇದ್ದರೂ ಸಹ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯವೇ ನಾಗರಾಜು ಅವರ ಸಾವಿಗೆ ನೇರ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಸ್ಥಳಕ್ಕೆ ಆಗಮಿಸಿ ಸೂಕ್ತ ಕ್ರಮದ ಕುರಿತು ಭರವಸೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆನೆ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ: ಆನೆ ಸೆರೆಗೆ ಅರಣ್ಯ ಇಲಾಖೆಯ ತಂಡ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಸೂಕ್ತ ಕ್ರಮ ವಹಿಸಲಾಗುತ್ತದೆ‌. ಮೃತರ ಕುಟುಂಬಸ್ಥರಿಗೆ 20 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಅರಣ್ಯ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com