

ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಮೊಮ್ಮಗಳ ಮೇಲೆ ತಾತನೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಯಿಯೊಬ್ಬರು ತಮ್ಮ ಮಗಳನ್ನು ತನ್ನ ತಾಯಿ ತಂದೆ ಮನೆಯಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ ಚೂರು ತೋರಿಸಿ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಆಕೆಯ ಅಜ್ಜನೇ ಯತ್ನಿಸಿದ್ದಾನೆ. ಇದಕ್ಕೆ ಸಹಕರಿಸದಿದ್ದಾಗ ಆಕೆಯ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಲು ಯತ್ನಿಸಿದ್ದಾನೆ. ಇದನ್ನು ಕಂಡ ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸದ್ಯ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ 75 ವರ್ಷದ ಶರಣಪ್ಪ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಸೆಪ್ಟೆಂಬರ್ 23ರಂದೇ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಶರಣಪ್ಪ ವಿರುದ್ಧ ಪೋಕ್ಸೋ ಕೇಸ್ ಹಾಗೂ ವಿವಿಧ ಸೆಕ್ಷನ್ ಗಳ ಅಡಿ ಕೇಸ್ ದಾಖಲಿಸಿರುವ ಕೆಂಭಾವಿ ಪೊಲೀಸರು ತನಿಖೆ ನಡೆಸಿದ್ದಾರೆ.