ಮರುತನಿಖೆಗೂ ಮುನ್ನ ಸೌಜನ್ಯ ಪ್ರಕರಣಕ್ಕೆ ಹಿನ್ನಡೆ: SIT ತಂಡದಿಂದ ಕೈಬಿಡುವಂತೆ ಎಎಸ್ ಪಿ ಪತ್ರ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರುತನಿಖೆ ಆರಂಭವಾಗುವ ಮೊದಲೇ ದೊಡ್ಡ ಹಿನ್ನಡೆಯಾಗಿದೆ. ಸೌಜನ್ಯ ಪ್ರಕರಣದ ಮರು​​ ತನಿಖೆಗಾಗಿ ರಚಿಸಿರೋ SIT ತಂಡದಿಂದ ತಮ್ಮನ್ನು ಕೈಬಿಡುವಂತೆ ಎಎಸ್‍ಪಿ ಡಾ.ವೆಂಕಟೇಶ್ ಪ್ರಸನ್ನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
Soujanya case
ಸೌಜನ್ಯ ಪ್ರಕರಣ
Updated on: 

ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರುತನಿಖೆ ಆರಂಭವಾಗುವ ಮೊದಲೇ ದೊಡ್ಡ ಹಿನ್ನಡೆಯಾಗಿದೆ. ಸೌಜನ್ಯ ಪ್ರಕರಣದ ಮರು​​ ತನಿಖೆಗಾಗಿ ರಚಿಸಿರೋ SIT ತಂಡದಿಂದ ತಮ್ಮನ್ನು ಕೈಬಿಡುವಂತೆ ಎಎಸ್‍ಪಿ ಡಾ.ವೆಂಕಟೇಶ್ ಪ್ರಸನ್ನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಚಿಸಿದ್ದ ಎಸ್ಐಟಿ ತಂಡದಲ್ಲಿ ಎಎಸ್ ಪಿ ವೆಂಕಟೇಶ್ ಪ್ರಸನ್ನ ಅವರು ಇದ್ದರು. ಆದರೆ ಇದಕ್ಕೆ ಸೌಜನ್ಯ ತಾಯಿ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎಸ್ಐಟಿ ತಂಡದಿಂದ ಹೊರಬರಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ವೆಂಕಟೇಶ್ ಪ್ರಸನ್ನ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

Soujanya case
2021ರ ಹೊಸಪೇಟೆ ಮಹಿಳೆ ಕೊಲೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ

ಐಜಿಪಿ ಶಶಿಕುಮಾರ್‌ ನೇತೃತ್ವದಲ್ಲಿ ಎಸ್‌ಐಟಿ ತಂಡ ರಚಿಸಲಾಗಿದ್ದು ತಂಡದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಮತ್ತು ಡಿಐಜಿ ಸಿ. ಎಚ್. ಸುಧೀರ್‌ ಕುಮಾರ್‌ ರೆಡ್ಡಿ, ಗುಪ್ತದಳದ ಎಸ್ಪಿ ನಿಶಾ ಜೇಮ್ಸ್, ಸಿಐಡಿ ಎಸ್ಪಿ ಲೋಕೇಶ್ ಜಗಲಸಾ‌ರ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಎಸ್ಪಿ ವೆಂಕಟೇಶ್ ಪ್ರಸನ್ನ ಸೇರಿ ನಾಲ್ವರು ಅಧಿಕಾರಿಗಳು ಸದಸ್ಯರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com