ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧ: ಲಕ್ಷ್ಮಣ ಸವದಿ

ಚುನಾವಣೆ ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು. ಮೀಸಲಾತಿ ಅಂತಿಮ ಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ದಾಖಲೆ ಸಲ್ಲಿಸಲಿದ್ದು, ಬಳಿಕ ಮೀಸಲಾತಿ ಅಂತಿಮ ಗೊಂಡು ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದೆ.
Laxman Savadi
ಲಕ್ಷ್ಮಣ ಸವದಿ
Updated on: 

ಹಾಸನ: ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾಪಂಚಾಯಿತಿ ಚುನಾವಣೆಗಳನ್ನು ಆದಷ್ಟು ಬೇಗ ನಡೆಸಲು ಸರ್ಕಾರ ತೀರ್ಮಾನಿಸಿದೆ. ಕೆಲವೇ ದಿನಗಳಲ್ಲಿ ಚುನಾವಣಾ ಅಧಿಸೂಚನೆ ಹೊರ ಬೀಳುವ ನಿರೀಕ್ಷೆಯಿದೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಹಾಸನದಲ್ಲಿ ಮಾತನಾಡಿದ ಅವರು, ಚುನಾವಣೆ ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು. ಮೀಸಲಾತಿ ಅಂತಿಮ ಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ದಾಖಲೆ ಸಲ್ಲಿಸ ಲಿದ್ದು, ಬಳಿಕ ಮೀಸಲಾತಿ ಅಂತಿಮ ಗೊಂಡು ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದೆ.

ರಾಜ್ಯದಲ್ಲಿ ಈ ಬಾರಿ 50 ವರ್ಷಗಳ ಅವಧಿಯಲ್ಲೇ ಅತ್ಯಂತ ಕಡಿಮೆ ಮಳೆಯಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಬರ ಘೋಷಣೆ ಪ್ರಕ್ರಿಯೆ ಆರಂಭವಾಗಿದೆ. ಬೆಳೆ ಹಾನಿ, ಜಾನುವಾರುಗಳ ರಕ್ಷಣೆ, ಕುಡಿಯುವ ನೀರು ಸೇರಿದಂತೆ ವಿವಿಧ ವಿಚಾರಗಳ ಕುರಿತು ಈಗಾಗಲೇ ಸಮೀಕ್ಷೆ ನಡೆಯುತ್ತಿದೆ. ಈ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಬರ ಪರಿಸ್ಥಿತಿ ಎದುರಿಸಬೇಕಿದೆ. ರೈತರಿಗೆ ಆಗಿರುವ ನಷ್ಟವನ್ನು ಹಂತ ಹಂತವಾಗಿ ತುಂಬಿಸುವ ಜವಾಬ್ದಾರಿ ಎರಡೂ ಸರ್ಕಾರಗಳ ಮೇಲಿದೆ ಎಂದು ಹೇಳಿದರು.

Laxman Savadi
ಸವದಿ v/s ಸವದಿ: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ ರೈತರಿಗೆ ಕರೆಂಟ್ ಕೊಡುವಂತೆ ಒತ್ತಾಯ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com