ಇದೇ ಮೊದಲ ಬಾರಿಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ಕ್ಕೆ ಸರ್ಕಾರ ಸಿದ್ಧತೆ!

ನವೆಂಬರ್ 9ರಂದು ಉರ್ದು ದಿನದ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
Minister UT Khader
ಸಚಿವ ಯು.ಟಿ. ಖಾದರ್
Updated on: 

ಬೆಂಗಳೂರು: ಉರ್ದು ದಿನಾಚರಣೆ ಪ್ರಯುಕ್ತ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದ ಆಶ್ರಯದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲು ಸಿದ್ಧತೆ ನಡೆದಿದೆ.

ನವೆಂಬರ್ 9ರಂದು ಉರ್ದು ದಿನದ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

‘ಕರ್ನಾಟಕ ಪರ್ವ 2026’ರ ನಾಲ್ಕನೇ ದಿನ ಉರ್ದು ಪತ್ರಿಕೆಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಉರ್ದು ಭಾಷೆ ಮತ್ತು ಸಾಹಿತ್ಯದ ಜೊತೆಗೆ ಅದರೊಂದಿಗೆ ಬೆಸೆದುಕೊಂಡಿರುವ ಸಂಸ್ಕೃತಿ, ಪರಂಪರೆ ಹಾಗೂ ಕಲಾ ಪ್ರಕಾರಗಳನ್ನು ರಾಜ್ಯದ ವಿವಿಧ ಸಮುದಾಯಗಳಿಗೆ ಪರಿಚಯಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

Minister UT Khader
ಉಪ್ಪು 'ಆರೋಗ್ಯಕ್ಕೆ ಹಾನಿಕರ': ಸಾಲ್ಟ್ ಸೇವನೆ ಕುರಿತು ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ; ದುಬಾರಿ ಆದ್ರೂ ಚಿಂತೆ ಇಲ್ಲ ಎಂದ ಸಚಿವರು!

ವಿಧಾನಸೌಧದ ಆವರಣದಲ್ಲಿ ವಿವಿಧ ಇಲಾಖೆಗಳು ಮತ್ತು ಕ್ಷೇತ್ರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವಾಗ, ಉರ್ದು ಭಾಷೆ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ಬೃಹತ್ ಬೃಹತ್ ಕಾರ್ಯಕ್ರಮವನ್ನೂ ಇದೇ ಸ್ಥಳದಲ್ಲಿ ನಡೆಸಬಹುದು ಎಂಬ ಚಿಂತನೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಪ್ರಸ್ತಾವಿತ ಉರ್ದು ಹಬ್ಬವನ್ನು ಕೇವಲ ಸಾಹಿತ್ಯ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ಉರ್ದು ಸಂಸ್ಕೃತಿ, ಪುಸ್ತಕ, ಆಹಾರ ಮತ್ತು ವಿವಿಧ ಕಲಾ ಪ್ರಕಾರಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com