ಬೈಕ್ ಸವಾರರೇ ಹುಷಾರ್, ಇನ್ಮುಂದೆ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ! ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಇನ್ನೂ ಕೇವಲ ಸವಾರರ ಮೇಲೆ ಮಾತ್ರ ಅಲ್ಲದೇ, ತಯಾರಿಕ ಕಂಪನಿಗಳ ಮೇಲೂ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
Casual Images
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಬೈಕ್ ಸವಾರರೇ ಹುಷಾರ್, ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ. ಸುರಕ್ಷಿತವಲ್ಲದ ಅರ್ಧ ಹೆಲ್ಮೆಟ್ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.

ಅಸುರಕ್ಷಿತ ಅರ್ಧ ಹೆಲ್ಮೆಟ್ ಉತ್ಪಾದನೆ ಮತ್ತು ತಯಾರಿಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಅಂತಾ ಸಾರಿಗೆ‌ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಾರಿಗೆ ಸಚಿವ ಬೈರತಿ ಸುರೇಶ್ ನೇತೃತ್ವದಲ್ಲಿ ನಡೆದ ರಸ್ತೆ ಸುರಕ್ಷತೆ, ಟ್ರಾಫಿಕ್ ನಿಯಮಗಳ ಉಲ್ಲಂಘನೆ ವಿಚಾರ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇನ್ನೂ ಕೇವಲ ಸವಾರರ ಮೇಲೆ ಮಾತ್ರ ಅಲ್ಲದೇ, ತಯಾರಿಕ ಕಂಪನಿಗಳ ಮೇಲೂ ಕ್ರಮಕ್ಕೆ ಸರ್ಕಾರ ಮುಂದಾಗಿದೆ.

Casual Images
ಗಿಟಾರ್ ಬ್ಯಾಗ್‌ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ! ಬೆಂಗಳೂರಿನಲ್ಲಿ AI ಕ್ಯಾಮೆರಾದಿಂದ ಮತ್ತೊಂದು ಎಡವಟ್ಟು

ಸಂಚಾರಿ ನಿಯಮದಡಿ ಹಾಫ್ ಹೆಲ್ಮೆಟ್ ಧರಿಸಿ ಸಂಚರಿಸುವ ಅವಕಾಶ ಇಲ್ಲದಿದ್ದರೂ, ಅವುಗಳನ್ನು ತಯಾರಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದು, ಬಹುತೇಕರು ಈ ಹೆಲ್ಮೆಟ್ ಗಳನ್ನು ನಿಯಮಗಳಿಂದ ತಪ್ಪಿಸಿಕೊಳ್ಳಲು ಮಾತ್ರ ಬಳಕೆ ಮಾಡುತ್ತಿದ್ದಾರೆ.

ಇದು ನಿಯಮ ಉಲ್ಲಂಘನೆ ಅನ್ನೋದು ಗೊತ್ತಿದ್ದು ಮಾರಾಟವಾಗುತ್ತಿದ್ದು, ಇದೇ ಕಾರಣಕ್ಕೆ ತಯಾರಿಕಾ ಕಂಪನಿಗಳ ವಿರುದ್ಧವೂ ಕ್ರಮಕ್ಕೆ ಸರ್ಕಾರ ಮುಂದಾಗಲಿದೆ. ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳೋದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com