ಮೈಸೂರು: ಪ್ರೀತಿಯ ಹೆಸರಲ್ಲಿ ಪೈಶಾಚಿಕ ಕೃತ್ಯ; ಬೆಂಕಿ ಹಚ್ಚಿಕೊಂಡು ಪ್ರೇಮ ನಿರಾಕರಿಸಿದ ಯುವತಿ ತಬ್ಬಿಕೊಂಡ ಪಾಗಲ್!

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚಂದನ್ (27) ಈ ಕೃತ್ಯ ಎಸಗಿದ್ದು, ಈತನಿಗೆ ಶೇ. 80ರಷ್ಟು ಸುಟ್ಟ ಗಾಯಗಳಾಗಿದ್ದರೆ, ಈತನಿಂದ ತಪ್ಪಿಸಿಕೊಂಡ ಯುವತಿಗೂ ಶೇ. 20ರಷ್ಟು ಸುಟ್ಟ ಗಾಯಗಳಾಗಿವೆ.
AI Image
ಎಐ ಚಿತ್ರ
Updated on: 

ಮೈಸೂರು: ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಪೆಟ್ರೋಲ್ ಸುರಿದು, ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಯುವಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಹಾಗೂ ಈ ಮೂಲಕ ಆಕೆಯನ್ನು ಕೊಲ್ಲಲು ಯತ್ನಿಸಿದ ಆಘಾತಕಾರಿ ಘಟನೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚಂದನ್ (27) ಈ ಕೃತ್ಯ ಎಸಗಿದ್ದು, ಈತನಿಗೆ ಶೇ. 80ರಷ್ಟು ಸುಟ್ಟ ಗಾಯಗಳಾಗಿದ್ದರೆ, ಈತನಿಂದ ತಪ್ಪಿಸಿಕೊಂಡ ಯುವತಿಗೂ ಶೇ. 20ರಷ್ಟು ಸುಟ್ಟ ಗಾಯಗಳಾಗಿವೆ.

ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಚಂದನ್ ಆಕೆಯನ್ನು ತಡೆದು ನಿಲ್ಲಿಸಿ, ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಪಟ್ಟು ಹಿಡಿದಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಆಕೆ ನಿರಾಕರಿಸಿದಾಗ, ಆತ ಆಕೆಯ ಹಾಗೂ ತನ್ನ ಮೇಲೆ ಪೆಟ್ರೋಲ್ ಸುರಿದು, ಆಕೆಯನ್ನು ಬಿಗಿಯಾಗಿ ಹಿಡಿದುಕೊಂಡು ಇಬ್ಬರಿಗೂ ಬೆಂಕಿ ಹಚ್ಚಿಕೊಂಡಿದ್ದಾನೆ. ಯುವತಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾಳೆ.

AI Image
ಲಗ್ಗೆರೆಯಲ್ಲಿ ವ್ಯಕ್ತಿ ಆತ್ಮಹತ್ಯೆ; ಕೊಲೆ ಎಂದು ಆರೋಪಿಸಿದ ಕುಟುಂಬಸ್ಥರು!

ಆರೋಪಿ ಚಂದನ್‌ ಗ್ರಾಮದವಳಾದ ಆಕೆ ಎಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸಕ್ಕಾಗಿ ವಿಜಯನಗರದ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಳು. ಹಾಸ್ಟೆಲ್‌ನಿಂದ ಕಾಲೇಜಿಗೆ ಹೋಗುತ್ತಿದ್ದಾಗ ಚಂದನ್ ಆಕೆಯನ್ನು ಅಡ್ಡಗಟ್ಟಿದ್ದ ಎಂದು ತಿಳಿದುಬಂದಿದೆ.

ಈ ಭಯಾನಕ ಘಟನೆಯು ವಿಡಿಯೋದಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಬೆಂಕಿಯ ಜ್ವಾಲೆಗಳು ಇಬ್ಬರನ್ನೂ ಆವರಿಸಿಕೊಳ್ಳುತ್ತಿದ್ದಂತೆಯೇ ಚಂದನ್ ಆಕೆಯನ್ನು ಹಿಡಿದುಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com