ಮೈಸೂರು ಅರಮನೆ ಮಾಲೀಕತ್ವ ವಿವಾದ ನ್ಯಾಯಾಲಯದ ಅಂಗಳದಲ್ಲಿದೆ, ಸದ್ಯಕ್ಕೆ ಚರ್ಚೆ ಅನಗತ್ಯ: ಯದುವೀರ್ ಒಡೆಯರ್
ಅರಮನೆ ವಿವಾದ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯವೇ ನಿರ್ಧಾರ ಕೈಗೊಳ್ಳಲಿದೆ. ರಾಜಕಾರಣಿಯಾಗಿ ನಾನು ಹೇಳುವುದಾದರೆ, ಕಾರ್ಯಾಂಗ ಮತ್ತು ಶಾಸಕಾಂಗವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ನಮಗೆ ಸೇರಿದ್ದನ್ನು ರಕ್ಷಿಸಿಕೊಳ್ಳಲು ನಾವೇ ಹೋರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.


