ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟ; ಮೂವರಿಗೆ ಗಂಭೀರ ಗಾಯ
ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಬಬ್ಲು, ಪಾನಿಪುರಿ ವ್ಯಾಪಾರಕ್ಕಾಗಿ ಇಲ್ಲಿ ಪ್ರತ್ಯೇಕ ಗೋದಾಮೊಂದನ್ನು ಬಾಡಿಗೆಗೆ ಪಡೆದಿದ್ದರು. ರಾತ್ರಿ ವೇಳೆ ಗೋದಾಮಿನಲ್ಲಿದ್ದ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿದ್ದು, ಒಳಗೆ ಅನಿಲ ಸಂಗ್ರಹವಾಗಿ ಒತ್ತಡ ಹೆಚ್ಚಾಗಿತ್ತು ಎನ್ನಲಾಗಿದೆ.


