ತೇಜಸ್ವಿನಿಗೌಡಗೆ ಟಿಕೆಟ್: 'ಕೈ' ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಪರವಾಗಿ ತೇಜಸ್ವಿನಿ ಗೌಡ ಅವರಿಗೆ ಟಿಕೆಟ್ ನೀಡುತ್ತಿರುವುದನ್ನು ವಿರೋಧಿಸಿ ಮಂಗಳವಾರ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಯಲಸೀಮಾ ಮಾದರಿಯಲ್ಲಿ ಚಂದಾಪುರದಿಂದ ಸುಮಾರು 40 ಟಾಟಾ ಸುಮೊಗಳಲ್ಲಿ ಮೆರವಣಿಗೆ ಮೂಲಕ ಆಗಮಿಸಿರುವ ಕಾರ್ಯಕರ್ತರು ದಕ್ಷಿಣ ಕ್ಷೇತ್ರದಿಂದ ಸ್ಥಳೀಯ ನಾಯಕರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. 'ತೇಜಸ್ವಿನಿಗೌಡ ಅವರು ಸ್ಥಳೀಯರಲ್ಲ. ಅವರ ಮುಖ ಪರಿಚಯವೂ ಸಹ ನಮ್ಮ ಕ್ಷೇತ್ರದ ಜನತೆಗೆ ತಿಳಿದಿಲ್ಲ. ಸ್ಥಳೀಯ ಮಟ್ಟದಲ್ಲಿಯೇ ಕಾಂಗ್ರೆಸ್‌ನಲ್ಲಿ ಪ್ರಮುಖ ನಾಯಕರಿದ್ದಾರೆ. ಮಹಿಳಾ ಮೀಸಲು ಆಧಾರದ ಮೇಲೆ ಟಿಕೆಟ್ ನೀಡುವುದಾದರೆ ಸ್ಥಳೀಯ ನಾಯಕರಾದ ಸುಷ್ಮಾ ರಾಜಗೋಪಾಲ ರೆಡ್ಡಿ ಅವರಿಗೆ ನೀಡಲಿ. ಅಥವಾ ಅವರ ಪತಿ ರಾಜಗೋಪಾಲರೆಡ್ಡಿ ಅವರಿಗೇ ಟಿಕೆಟ್ ನೀಡಬೇಕು' ಎಂದು ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.
ಆದರೆ ಈ ಪ್ರತಿಭಟನೆಯ ಹಿಂದೆ ಪಕ್ಷದ ಪ್ರಭಾವಿ ನಾಯಕರೊಬ್ಬರ ಕೈವಾಡವಿದೆ. ಅವರೇ ಸ್ವತಃ ಮುಂದೆ ನಿಂತು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತೇಜಸ್ವಿನಿಗೌಡ ಅವರ ಬೆಂಬಲಿಗರು ಆರೋಪ ಮಾಡುತ್ತಿದ್ದಾರೆ.
ಒಟ್ಟಾರೆ ಚುನಾವಣಾ ದಿನಾಂಕ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಬಂಡಾಯದ ಬಿಸಿ ಜೋರಾಗ ತೊಡಗಿದೆ. ಅದರಲ್ಲಿಯೂ ಕಾಂಗ್ರೆಸ್ ಪಕ್ಷದ ಮಟ್ಟಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆ. ಪಕ್ಷದ ಪ್ರಭಾವಿ ನಾಯಕರು ತಮ್ಮ ಪ್ರಭಾವವನ್ನು ಬಳಸಿ ತಮ್ಮ ಬೆಂಬಲಿಗರಿಗೇ ಟಿಕೆಟ್ ಕೊಡಿಸುವ ಕಾರ್ಯದಲ್ಲಿ ತೊಡಗಿದ್ದರೆ, ಪ್ರತಿಭಟನೆ ನಡೆಸಿಯಾದರೂ ಸರಿ ತಮ್ಮ ನಾಯಕರಿಗೇ ಟಿಕೆಟ್ ಕೊಡಿಸಬೇಕು ಎಂದು ಕಾರ್ಯಕರ್ತರು ಹವಣಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

