ಚುನಾವಣೆ ಹಿನ್ನೆಲೆ: ಮಿರ್ಜಿ ಎತ್ತಂಗಡಿ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಚುನಾವಣಾ ಆಯೋಗದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಮಿರ್ಜಿ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ರಾಘವೇಂದ್ರ ಔರಾದ್ಕರ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಮಿರ್ಜಿ ಅವರನ್ನು ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಔರಾದ್ಕರ್ ಅವರನ್ನು ನೇಮಕ ಮಾಡುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಂಗನಾಥ್ ಅವರಿಗೆ ಚುನಾವಣಾ ಆಯೋಗ ಪತ್ರ ಬರೆದಿತ್ತು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿದ್ದ 1986ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ರಾಘವೇಂದ್ರ ಅವರು 2010ರಿಂದ ಗೃಹ ಇಲಾಖೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

